ಮೈಸೂರು:ಅರಮನೆಯ ಅಂಬಾ ವಿಲಾಸದ ವ್ಯೂ ಗ್ಯಾಲರಿಯಲ್ಲಿ ಶ್ರೀ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದರು.
ಜಯಚಾಮರಾಜ ಒಡೆಯರ್ ಕಾರ್ಯವನ್ನು ಕೊಂಡಾಡಿದ ರಾಷ್ಟ್ರಪತಿ ಕೋವಿಂದ್ - ಒಡೆಯರ್ ಜನ್ಮ ಶತಮಾನೋತ್ಸವ
ಮೈಸೂರಿನಲ್ಲಿ ನಡೆದ ಶ್ರೀ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗವಹಿಸಿ, ಒಡೆಯರ್ ಅವರ ಜನಪರ ಕಾರ್ಯಕ್ರಮಗಳನ್ನು ಕೊಂಡಾಡಿದರು.
ಜಯಚಾಮರಾಜ ಒಡೆಯರ್ ಕಾರ್ಯವನ್ನು ಕೊಂಡಾಡಿದ ರಾಷ್ಟ್ರಪತಿ ಕೋವಿಂದ್
ನಂತರ ವಿದ್ಯಾ ಸಂಕೀರ್ತನಾ ಕೃತಿ ಬಿಡುಗಡೆ ಮಾಡಿ ಮಾತನಾಡಿದ ರಾಷ್ಟ್ರಪತಿಗಳು, ಸಮಾಜಕ್ಕೆ ಜಯ ಚಾಮರಾಜ ಒಡೆಯರ್ ಅವರ ಕೊಡುಗೆಯನ್ನು ಶ್ಲಾಘಿಸಿದರು. ನಂತರ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಜಯಚಾಮರಾಜ ಒಡೆಯರ್ ಅವರ ವಿದ್ಯಾಪೀಠದ ಶಿಲಾನ್ಯಾಸ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಪೊಲೀಸ್ ಬ್ಯಾಂಡ್ ನುಡಿಸುವ ಮೂಲಕ ರಾಷ್ಟ್ರಪತಿಗೆ ಗೌರವ ವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಜಿಲ್ಲಾ ಉಸ್ತುವಾರಿ ಸಚಿವರು, ರಾಜಮಾತೆ ಪ್ರಮೋದಾದೇವಿ ಒಡೆಯರ್ ಭಾಗವಹಿಸಿದ್ದರು.