ಮೈಸೂರು : ಅಕ್ಟೋಬರ್ 5ರಂದು ನಡೆದ ದಸರಾ ಜಂಬೂಸವಾರಿ ಮತ್ತು ನವರಾತ್ರಿ ಆಚರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂಸವಾರಿಯಲ್ಲಿ ಲಕ್ಷಾಂತರ ಜನ ಭಾಗವಹಿಸಿದ್ದರು.
ಮೈಸೂರು ದಸರಾ ಆಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ - ಈಟಿವಿ ಭಾರತ ಕನ್ನಡ
ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಸೂರು ದಸರಾ ಆಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಮೈಸೂರು ದಸರಾ ಅದ್ಭುತವಾಗಿದೆ. ತಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಸುಂದರವಾಗಿ ಉಳಿಸಿಕೊಂಡಿರುವ ಮೈಸೂರಿನ ಜನತೆಯನ್ನು ನಾನು ಶ್ಲಾಘಿಸುತ್ತೇನೆ. 2022ರ ಯೋಗ ದಿನದ ನನ್ನ ಮೈಸೂರು ಭೇಟಿಯ ಅಚ್ಚುಮೆಚ್ಚಿನ ನೆನಪುಗಳಿವೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ :ಕೆಂಪೇಗೌಡ ಟು ಹೆಚ್ಎಎಲ್ ನಡುವೆ ಹೆಲಿಕ್ಯಾಪ್ಟರ್ ಸೇವೆ: ಟ್ರಾಫಿಕ್ ಕಿರಿಕಿರಿ ಇಲ್ಲದೇ 12 ನಿಮಿಷಗಳ ಪ್ರಯಾಣ