ಮೈಸೂರು:ನಾಡದೇವತೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾತ್ರಿ ಚಾಮುಂಡೇಶ್ವರಿ ಬೆಟ್ಟಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ದೇವಾಲಯದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ಅವರು ಮೋದಿಯವರ ಆಶಯದಂತೆ ಸಂಕಲ್ಪ ಪೂಜೆ ಸಲ್ಲಿಸಿದರು.
ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ದೇವಾಲಯದ ಆರಂಭದಲ್ಲಿರುವ ಮಹಾಗಣಪತಿಗೆ ಪೂಜೆ ಸಲ್ಲಿಸಿದ ಮೋದಿ, ಬಳಿಕ ದೇವಾಲಯದ ಒಳಭಾಗಕ್ಕೆ ಆಗಮಿಸಿ ಅಲ್ಲಿ ಚಾಮುಂಡಿ ತಾಯಿಯ ಪಾದುಕೆಗೆ ಪೂಜೆ ನೆರವೇರಿಸಿದರು. ನಂತರ ಮೂಲ ಚಾಮುಂಡಿ ತಾಯಿಯ ಗರ್ಭಗುಡಿಯ ಮುಂಭಾಗದಲ್ಲಿ ಕುಳಿತು ಪ್ರಾರ್ಥನೆ, ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿ, ಆಂಜನೇಯನಿಗೆ ನಮಿಸಿದರು.
ಶ್ರೀ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಆರತಿ ಸ್ವೀಕರಿಸಿ ನಮಿಸಿದ ಪ್ರಧಾನಿ ಇದೇ ಮೊದಲ ಬಾರಿಗೆ ಮೋದಿ ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ನಾಳೆ ಬೆಳಗ್ಗೆ ಮೈಸೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಮುನ್ನ ಸುತ್ತೂರು ಮಠದ ಶಾಖಾ ಮಠಕ್ಕೆ ತೆರಳಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಿದ್ದರು.
ಶ್ರೀ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರಧಾನಿ ಮೋದಿ ಅದಕ್ಕೂ ಮುಂಚಿತವಾಗಿ ಮೈಸೂರು ನಾಗನಹಳ್ಳಿ ರೈಲ್ವೆ ಕೋಚಿಂಗ್ ಕಾಂಪ್ಲೆಕ್ಸ್, ಶಂಕುಸ್ಥಾಪನೆ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ 150 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ದಿವ್ಯಾಂಗರ ಕಟ್ಟಡ ಉದ್ಘಾಟನೆ ನೆರವೇರಿಸಿದರು.
ಇದನ್ನೂ ಓದಿ:ಸಬ್-ಅರ್ಬನ್ ರೈಲು ಕಾಮಗಾರಿಗೆ ಮೋದಿ ಅಡಿಪಾಯ; ಒಂದೇ ಒಂದು ಕಾಮಗಾರಿಗೆ ಆಗದ ಕಾರ್ಯಾದೇಶ!