ಕರ್ನಾಟಕ

karnataka

ETV Bharat / state

ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ಆಗಮನ: ವಿಕ್ರಂ ಸಿಂಗ್ - ಕೇಂದ್ರ ಆಯುಷ್ ಇಲಾಖೆಯ ಅಧಿಕಾರಿಗಳ ತಂಡ ಅರಮನೆ ಆವರಣಕ್ಕೆ ಭೇಟಿ

ಯೋಗಕ್ಕೆ ಮೈಸೂರು ಸಾಕಷ್ಟು ಕೊಡುಗೆ ನೀಡಿದೆ. ಸಾಕಷ್ಟು ಯೋಗ ತಜ್ಣರು ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ ಪ್ರಧಾನಿಯವರು ಯೋಗ ದಿನಾಚರಣೆಗೆ ಮೈಸೂರಿಗೆ ಆಗಮಿಸುತ್ತಿದ್ದು, ಇದು ಮೈಸೂರಿನ ಗರಿಮೆಯನ್ನು ಹೆಚ್ಚಿಸುತ್ತದೆ ಎಂದು ಕೇಂದ್ರ ಆಯುಷ್ ಮಂತ್ರಾಲಯದ ನಿರ್ದೇಶಕರಾದ ವಿಕ್ರಂ ಸಿಂಗ್ ಹೇಳಿದ್ದಾರೆ.

Prime Minister Modi will arrive for the Mysore International Yoga celebration
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ

By

Published : Jun 2, 2022, 7:35 PM IST

ಮೈಸೂರು: ಈ ವರ್ಷ ಮೈಸೂರಿನಲ್ಲಿ ಆಚರಿಸಲಾಗುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಇದು ತುಂಬಾ ಸಂತೋಷದ ವಿಷಯವಾಗಿದೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಆಯುಷ್ ಮಂತ್ರಾಲಯದ ನಿರ್ದೇಶಕರಾದ ವಿಕ್ರಂ ಸಿಂಗ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೈಸೂರು ಸಾಂಸ್ಕೃತಿಕ ಪರಂಪರೆಗೆ ಹೆಸರು ವಾಸಿಯಾಗಿದೆ. ಯೋಗಕ್ಕೆ ಮೈಸೂರು ಸಾಕಷ್ಟು ಕೊಡುಗೆ ನೀಡಿದೆ. ಸಾಕಷ್ಟು ಯೋಗ ತಜ್ಣರು ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದೇಶಿ ಪ್ರಜೆಗಳು ಮೈಸೂರಿಗೆ ಆಗಮಿಸಿ ಯೋಗ ಕಲಿಯುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ ಪ್ರಧಾನಿಯವರು ಯೋಗ ದಿನಾಚರಣೆಗೆ ಮೈಸೂರಿಗೆ ಆಗಮಿಸುತ್ತಿದ್ದು, ಇದು ಮೈಸೂರಿನ ಗರಿಮೆ ಹೆಚ್ಚಿಸುತ್ತದೆ ಎಂದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ

ಮೈಸೂರಿನ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಭಾರತ ಸರ್ಕಾರ ಹಾಗೂ ಆಯುಷ್ ಮಂತ್ರಾಲಯದಿಂದ ಆಯೋಜಿಸಲಾಗುತ್ತಿದೆ. ಯೋಗ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯವಶ್ಯಕ. ಯೋಗವನ್ನು ಸಾಮರಸ್ಯಕ್ಕಾಗಿ ಹಾಗೂ ಮನಃಶಾಂತಿಗಾಗಿ ಮಾಡಬೇಕು. ಮೈಸೂರಿನಲ್ಲಿ ಜೂನ್ 20 ಮತ್ತು 21 ರಂದು ಯೋಗ ವಸ್ತುಪ್ರದರ್ಶನವನ್ನು ಸಹ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಏರ್ಪಡಿಸಲಾಗುತ್ತದೆ. ಈ ವಸ್ತು ಪ್ರದರ್ಶನದಲ್ಲಿ ಡಿಜಿಟಲ್ ಎಕ್ಸಿಬಿಷನ್ ಹಾಗೂ ಸ್ಟಾಲ್ ಎಕ್ಸಿಬಿಷನ್ ಎಂದು ಎರಡು ಭಾಗಗಳಲ್ಲಿ ಇರುತ್ತದೆ ಎಂದು ಮಾಹಿತಿ ನೀಡಿದರು.

ಮುರಾರ್ಜಿ ದೇಸಾಯಿ ನ್ಯಾಷನಲ್ ಇನ್ಸಿಟ್ಯೂಟ್‌ನ ನಿರ್ದೇಶಕರಾದ ಬಸವರೆಡ್ಡಿ ಅವರು ಮಾತನಾಡಿ, ಈ ವರ್ಷ ಸ್ವಾತಂತ್ರ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಕರ್ನಾಟಕದ 75 ಸ್ಥಳಗಳಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಯೋಗ ದಿನಾಚರಣೆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಬಿಜೆಪಿಯವರ ಜಾಹೀರಾತು ರಾಜ್ಯಕ್ಕೆ ಅವಮಾನ : ಸಿದ್ದರಾಮಯ್ಯ

ಮಾನ್ಯ ಪ್ರಧಾನಿಯವರ ಯೋಗ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳು, ಪೊಲೀಸ್ ಸಿಬ್ಬಂದಿ, ದಿವ್ಯಾಂಗರು, ಲಿಂಗತ್ವ ಅಲ್ಪಸಂಖ್ಯಾತರು, ಪೌರಕಾರ್ಮಿಕರು ಸೇರಿದಂತೆ ಇನ್ನೂ ಮುಂತಾದ ವಿವಿಧ ವರ್ಗಗಳ ಜನರಿಗೆ ಯೋಗ ಪ್ರದರ್ಶನದಲ್ಲಿ ಅವಕಾಶ ನೀಡಲಾಗುವುದು. ಅರಮನೆ ಆವರಣದಲ್ಲಿ 12 ಸಾವಿರ ಜನರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

ಕೇಂದ್ರ ಆಯುಷ್ ಇಲಾಖೆಯ ಅಧಿಕಾರಿಗಳ ತಂಡ ಅರಮನೆ ಆವರಣಕ್ಕೆ ಭೇಟಿ

ಸಭೆಯ ನಂತರ ಕೇಂದ್ರ ಆಯುಷ್ ಇಲಾಖೆಯ ಅಧಿಕಾರಿಗಳ ತಂಡವು ಅರಮನೆ ಆವರಣಕ್ಕೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿತು. ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್, ಆಯುಷ್ ಇಲಾಖೆಯ ಆಯುಕ್ತರಾದ ರಾಮಚಂದ್ರ, ಮೈಸೂರು ಪೊಲೀಸ್ ಆಯುಕ್ತರಾದ ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪೂರ್ಣಿಮಾ, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚೇತನ್, ಅಪರ ಜಿಲ್ಲಾಧಿಕಾರಿಗಳಾದ ಡಾ.ಮಂಜುನಾಥಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

...view details