ಕರ್ನಾಟಕ

karnataka

ETV Bharat / state

ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರುವುದಿಲ್ಲ.. ಎಸ್ ಟಿ ಸೋಮಶೇಖರ್

ದಸರಾ ಜಂಬೂ ಸವಾರಿಯ ಪುಷ್ಪಾರ್ಚನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಿಲ್ಲ, ಬದಲಾಗಿ ಕೇಂದ್ರದ 4 ಜನ ಮಂತ್ರಿಗಳು ದಸರಾ ಉದ್ಘಾಟನೆಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

Minister ST Somashekhar
ಸಚಿವ ಎಸ್ ಟಿ ಸೋಮಶೇಖರ್

By

Published : Sep 17, 2022, 3:12 PM IST

Updated : Sep 17, 2022, 5:13 PM IST

ಮೈಸೂರು: ದಸರಾ ಜಂಬೂ ಸವಾರಿಯ ಪುಷ್ಪಾರ್ಚನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ದಸರಾ ಉದ್ಘಾಟನೆಗೆ ಸೆ.26 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದು, ಅವರ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಅವರು ಮೈಸೂರು ಅರಮನೆಗೆ ಭೇಟಿ ನೀಡುವ ಬಗ್ಗೆ ಮಾಹಿತಿ ಕೇಳಲಾಗಿದೆ. ಆದರೆ, ರಾಷ್ಟ್ರಪತಿ ಭವನದಿಂದ ಅರಮನೆ ಭೇಟಿ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ, ಬಂದ ಮೇಲೆ ಅಂತಿಮವಾಗುತ್ತದೆ ಎಂದರು.

ಸಚಿವ ಎಸ್ ಟಿ ಸೋಮಶೇಖರ್ ಮಾರ್ಧಯಮದೊಂದಿಗೆ ಮಾತನಾಡಿದರು.

ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕ್ರಮಗಳನ್ನು ಅಂತಿಮಗೊಳಿಸಲಾಗುತ್ತಿದೆ. ಆದರೆ, ದಸರಾ ಜಂಬೂ ಸವಾರಿಯ ಪುಷ್ಪಾರ್ಚನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಿಲ್ಲ, ಬದಲಾಗಿ ಕೇಂದ್ರದ 4 ಜನ ಮಂತ್ರಿಗಳು ದಸರಾ ಉದ್ಘಾಟನೆಗೆ ಆಗಮಿಸುವ ನಿರೀಕ್ಷೆಯಿದೆ. ಅದರ ಆಧಾರದ ಮೇಲೆ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಯಾರಿರಬೇಕು ಎಂಬುದು ಅಂತಿಮವಾಗಲಿದೆ ಎಂದರು.

ಈ ಬಾರಿ ದಸರಾ ಪಾಸ್ ಹಾಗೂ ಗೋಲ್ಡ್ ಪಾಸ್ ಬಗ್ಗೆ ಇಂದು ಸಭೆ ನಡೆಯಲಿದ್ದು, ಸಂಜೆ ವೇಳೆಗೆ ಅಂತಿಮವಾಗಲಿದೆ. ಇದರ ಜೊತೆಗೆ ಯುವ ದಸರಾದಲ್ಲಿ ಯಾವೆಲ್ಲ ಕಾರ್ಯಕ್ರಮಗಳು ಇರಲಿವೆ ಎಂಬುದು ಸಹ ಇಂದೇ ಅಂತಿಮವಾಗಲಿದೆ. ದಸರಾಗೆ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡುವುದಾಗಿ ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.

ಈ ಬಾರಿ ಮೈಸೂರು ನಗರದಲ್ಲಿ ಆಕರ್ಷಕವಾಗಿ ದೀಪಾಲಂಕಾರ ಮಾಡಲು 4.5 ಕೋಟಿ ಹಣ ನಿಗದಿ ಮಾಡಲಾಗಿದೆ. ಎಲ್ಲ ಕೆಲಸವೂ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ:ಮೈಸೂರು ದಸರಾ.. ಯುವ ಸಂಭ್ರಮಕ್ಕೆ ಚಾಲನೆ ನೀಡಿದ‌ ನಟ ಡಾಲಿ ಧನಂಜಯ್

Last Updated : Sep 17, 2022, 5:13 PM IST

ABOUT THE AUTHOR

...view details