ಕರ್ನಾಟಕ

karnataka

By

Published : Dec 6, 2022, 5:20 PM IST

ETV Bharat / state

ಆದಿಚುಂಚನಗಿರಿ ಶ್ರೀಗಳನ್ನು ಸಿಎಂ ಅಭ್ಯರ್ಥಿಯೆಂದು ಬಿಂಬಿಸಲು ಬಿಜೆಪಿ ಪ್ಲಾನ್: ಮಹೇಶ್ ಚಂದ್ರಗುರು

ರಾಜ್ಯದಲ್ಲಿ ಒಕ್ಕಲಿಗರ ಮತ ಸೆಳೆಯಲು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲು ಬಿಜೆಪಿ ಮುಂದಾಗಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಆರೋಪಿಸಿದ್ದಾರೆ.

prof-mahesh-chandraguru-spoke-about-nirmalananda-swamiji
ಆದಿಚುಂಚನಗಿರಿ ಶ್ರೀಗಳನ್ನು ಸಿಎಂ ಅಭ್ಯರ್ಥಿ ಎಂದು ಬಿಂಬಿಸಲು ಬಿಜೆಪಿ ಪ್ಲಾನ್ : ಮಹೇಶ್ ಚಂದ್ರಗುರು

ಮೈಸೂರು:ರಾಜ್ಯದಲ್ಲಿ ಒಕ್ಕಲಿಗರ ಮತ ಸೆಳೆಯಲು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಕರ್ನಾಟಕದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲು ಬಿಜೆಪಿ ಮುಂದಾಗಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಹೇಳಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳನ್ನು ರಾಜಕೀಯಕ್ಕೆ ಕರೆತರಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನು ರಾಜಕೀಯಕ್ಕೆ ತಂದು ಈಗ ಬುಲ್ಡೋಜರ್ ಸಂಸ್ಕೃತಿ ಜಾರಿಗೆ ತಂದಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಸ್ವಾಮೀಜಿಯವರನ್ನು ಸಿಎಂ ಮಾಡಲು ಬಿಜೆಪಿ ಮುಂದಾಗಿದೆ ಎಂದರು.

ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು

'ಸ್ವಾಮೀಜಿಗಳ ಪರಂಪರೆ ಉಳಿಸಿ': ಆದಿಚುಂಚನಗಿರಿ ಕ್ಷೇತ್ರಕ್ಕೆ ಒಂದು ದೊಡ್ಡ ಇತಿಹಾಸ ಇದೆ. ಯಾವುದೇ ಆಮಿಷಗಳಿಗೆ ನಿರ್ಮಲಾನಂದ ಸ್ವಾಮೀಜಿ ಒಳಗಾಗಬೇಡಿ. ನೀವು ರಾಜಕೀಯ ಪ್ರವೇಶ ಮಾಡುವುದು ಸೂಕ್ತವಲ್ಲ. ನಿಮ್ಮಿಂದ ಸ್ವಾಮೀಜಿಗಳ ಪರಂಪರೆಗೆ ಧಕ್ಕೆ ತರುವ ಕೆಲಸ ಆಗಬಾರದು. ಬಾಲಗಂಗಾಧರನಾಥರು ಶಿಕ್ಷಣ, ದಾಸೋಹಕ್ಕೆ ಪ್ರಾಮುಖ್ಯತೆ ಕೊಟ್ಟಿದ್ದಾರೆ. ತಾವು ಅದನ್ನು ಉಳಿಸಿ ಎಂದು ಮನವಿ ಮಾಡಿದರು.

ಸಂಸದ ಪ್ರತಾಪ್ ಸಿಂಹ ಮತ್ತು ಇನ್ನೊಬ್ಬ ಸಂಸದ ತೇಜಸ್ವಿ ಸೂರ್ಯ, ಸಂವಿಧಾನವನ್ನು ಬದಲಾವಣೆ ಮಾಡುವುದಕ್ಕೆ ನಾವು ಬಂದಿರುವುದು ಎಂದು ಹೇಳಿದ್ದಾರೆ. ಸಂವಿಧಾನವನ್ನು ಬದಲಾವಣೆ ಮಾಡಲು ಸಾಧ್ಯವೇ? ನಮ್ಮ ದೇಶದ ಸಂವಿಧಾನವನ್ನು ಯಾರೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಸಂವಿಧಾನವನ್ನು ಪರೋಕ್ಷವಾಗಿ ದುರ್ಬಲಗೊಳಿಸುತ್ತಿದ್ದಾರೆ ಎಂದು ಟೀಕಿಸಿದರು.

ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡುವ ಮೂಲಕ ಸಂವಿಧಾನಾತ್ಮಕ ಹಕ್ಕು ಬಾಧ್ಯತೆಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಅಷ್ಟೇ. ಮೂಲ ಸಂವಿಧಾನವನ್ನು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಎಷ್ಟೇ ಪ್ರಚಂಡ ಬಹುಮತ ಪಡೆದು ಏನೇ ಪ್ರಯತ್ನ ಮಾಡಿದರೂ ಸಂವಿಧಾನದ ಬುಡ ಅಲ್ಲಾಡಿಸಲಾಗದು. ಅಂತಹ ಸಂವಿಧಾನವನ್ನು ನಮ್ಮ ಬಾಬಾ ಸಾಹೇಬರು ಈ ದೇಶಕ್ಕೆ ಕೊಟ್ಟಿದ್ದಾರೆ ಎಂದರು.

ಎನ್‌ಡಿಎ ಸರಕಾರ ಭಾವನಾತ್ಮಕವಾಗಿ ಜನರನ್ನು ದಾರಿ ತಪ್ಪಿಸುತ್ತಿದೆ. ಮತಕ್ಕೋಸ್ಕರ ಏನಾದರೂ ಮಾಡಲು ಇವರು ಸಿದ್ದರಾಗಿದ್ದಾರೆ ಎಂದು ಪ್ರೊ.ಮಹೇಶ್ ಚಂದ್ರಗುರು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಮತದಾನ ತಡೆಯಲು ಬಿಜೆಪಿ ಗಿಮಿಕ್​ ಆರೋಪ: ಕಾಂಗ್ರೆಸ್​ನಿಂದ ಚುನಾವಣಾ ಆಯೋಗಕ್ಕೆ ದೂರು

ABOUT THE AUTHOR

...view details