ಮೈಸೂರು: ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜಾ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಕಾರ್ಯಕ್ರಮಗಳನ್ನು ನಿರ್ಬಂಧಿಸಿ ನಿಷೇಧಾಜ್ಞೆ ಹೇರಲಾಗಿದೆ.
ನಾಳೆ ರಾಮ ಮಂದಿರ ಭೂಮಿ ಪೂಜೆ... ಮೈಸೂರಿನಲ್ಲಿ ನಿಷೇಧಾಜ್ಞೆ - ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ
ಅಯೋಧ್ಯೆಯಲ್ಲಿ ನಾಳೆ ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನು ನಿರ್ಬಂಧಿಸಿ ನಿಷೇಧಾಜ್ಞೆ ಹೇರಲಾಗಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ಮೈಸೂರು ನಗರದ ಹಲವು ಭಾಗಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಿರುವುದು ಗಮನಕ್ಕೆ ಬಂದಿದ್ದು, ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಯಾವುದೇ ವ್ಯಕ್ತಿಗಳು ಗುಂಪು ಸೇರದಂತೆ, ಯಾವುದೇ ಪೂಜಾ ಕೈಂಕರ್ಯ ಕೈಗೊಳ್ಳದಂತೆ, ವಿಜಯೋತ್ಸವ ಆಚರಿಸದಂತೆ, ಪಟಾಕಿ ಸಿಡಿಸದಂತೆ ಇಂದು ರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿಯವರೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.