ಕರ್ನಾಟಕ

karnataka

ETV Bharat / state

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ - mysuru Prostitution case

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಮೈಸೂರು ನಗರದ ಸಿಸಿಬಿ ಪೊಲೀಸರು, ನಾಲ್ವರನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

Prostitution
ವೇಶ್ಯಾವಾಟಿಕೆ

By

Published : Mar 1, 2020, 6:48 AM IST

ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ನಗರದ ಸಿಸಿಬಿ ಪೊಲೀಸರು, ನಾಲ್ವರನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ರಾಮಕೃಷ್ಣನಗರ ರಾಮಣ್ಣ (51), ಜಯಪುರ ಹೋಬಳಿಯ ಗೀತಾ (38), ಮೇಟಗಳ್ಳಿ ನಿವಾಸಿ ರಾಧಾ (40)‌ ಹಾಗೂ ವೆಂಕಟೇಶ (24) ಎಂಬುವರೆ ಬಂಧಿತ ಆರೋಪಿಗಳು.

ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಮೈಸೂರಿನ ವಿಜಯನಗರ 4ನೇ ಹಂತ, 2ನೇ ಫೇಸ್ 4ನೇ ಕ್ರಾಸ್​​ನಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಗೀತಾ ವಿರುದ್ಧ ಈ ಹಿಂದೆಯೂ ಕೂಡ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಬಗ್ಗೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ABOUT THE AUTHOR

...view details