ಮೈಸೂರು:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಎಸ್ಡಿಪಿಎಫ್ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಎಸ್ಡಿಪಿಎಫ್ ಪ್ರತಿಭಟನೆ.. ಪುರಭವನದ ಮುಂಭಾಗ ಜಮಾಯಿಸಿದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಇದರಿಂದ ಹಲವಾರು ಪರಿಣಾಮ ಬೀರಲಿದೆ. ವೋಟು ರಾಜಕಾರಣಕ್ಕಾಗಿ ಕೇಂದ್ರ ಸರ್ಕಾರ ಇಂತಹ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಆರ್ಥಿಕ ಸಮಸ್ಯೆ, ಬಡತನ ನಿರ್ಮೂಲನೆ, ಉದ್ಯೋಗ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳಿವೆ. ಅದನ್ನು ಬಗೆಹರಿಸದೇ ದೇಶದ ಜನರ ದಿಕ್ಕು ತಪ್ಪಿಸಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿದ್ದಾರೆ ಎಂದು ಕಿಡಿಕಾರಿದರು.