ಕರ್ನಾಟಕ

karnataka

ETV Bharat / state

5 ತಿಂಗಳಿಂದ ಪಾವತಿಯಾಗದ ವೇತನ: ಮೈಸೂರಿನಲ್ಲಿ ಪೌರಕಾರ್ಮಿಕರಿಂದ ಪ್ರತಿಭಟನೆ - ವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ

ಕಳೆದ 5 ತಿಂಗಳಿನಿಂದ ವೇತನ ನೀಡಿಲ್ಲ. ಕೂಡಲೇ ಪಾಲಿಕೆ ಅಧಿಕಾರಿಗಳು ನೇರ ವೇತನ ಪಾವತಿ ಮಾಡಬೇಕು ಎಂದು ಮೈಸೂರಲ್ಲಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

Protest by civil workers in Mysore
ಮೈಸೂರಲ್ಲಿ ಪೌರ ಕಾರ್ಮಿಕರಿಂದ ಪ್ರತಿಭಟನೆ

By

Published : Aug 26, 2020, 3:34 PM IST

ಮೈಸೂರು: ಐದು ತಿಂಗಳಿನಿಂದ ವೇತನ ನೀಡಿಲ್ಲವೆಂದು ಆರೋಪಿಸಿ ಸ್ವಚ್ಛತಾ ಕಾರ್ಯವನ್ನ ಸ್ಥಗಿತಗೊಳಿಸಿ ನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.

ನಗರ ಪಾಲಿಕೆ ಮುಂಭಾಗ ಜಮಾಯಿಸಿದ ಪೌರಕಾರ್ಮಿಕರು, ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. 5 ತಿಂಗಳಿಂದ ಪೌರಕಾರ್ಮಿಕರಿಗೆ ವೇತನ‌ ನೀಡದೆ ಇರುವುದರಿಂದ ಜೀವನ ನಡೆಸಲು ಕಷ್ಟವಾಗಿದೆ. ನೇರ ಪಾವತಿ ಅಡಿಯಲ್ಲಿ ವೇತನ ನೀಡುವಂತೆ ಜಿಲ್ಲಾಧಿಕಾರಿ ಆದೇಶವಿದ್ದರೂ ಪಾಲಿಕೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ ಎಂದು ಕಿಡಿಕಾರಿದರು.

ಮೈಸೂರಿನಲ್ಲಿ ಪೌರಕಾರ್ಮಿಕರಿಂದ ಪ್ರತಿಭಟನೆ

ಕೂಡಲೇ ಪಾಲಿಕೆ ಅಧಿಕಾರಿಗಳು ನೇರ ವೇತನ ನೀಡಬೇಕು. ಕೋವಿಡ್​ನಿಂದ ಮೃತರಾದ ಪೌರಕಾರ್ಮಿಕರಿಗೆ 30 ಲಕ್ಷ ಪರಿಹಾರ ಘೋಷಣೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಮಾಡುವುದಾಗಿ ಎಚ್ಚರಿಕೆ ನೀದ್ದಾರೆ.

ABOUT THE AUTHOR

...view details