ಕರ್ನಾಟಕ

karnataka

ETV Bharat / state

ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ..

ಈ ಕಾಯ್ದೆಗೆ ರಾಜ್ಯ ಸರ್ಕಾರ ಬೆಂಬಲ ನೀಡಬಾರದು. ಒಂದು ವೇಳೆ ಬೆಂಬಲ ಕೊಟ್ಟರೆ ರಾಜ್ಯಾದ್ಯಂತ ರೈತರು ಬೀದಿಗಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Protest
ಪ್ರತಿಭಟನೆ

By

Published : May 14, 2020, 2:58 PM IST

ಮೈಸೂರು :ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು‌.

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ರೈತರಿಗೆ ಮತ್ತಷ್ಟು ಸಂಕಟ ನೀಡಲು ಮುಂದಾಗುತ್ತಿದೆ. ಕಾರ್ಪೊರೇಟ್ ಸೆಕ್ಟರ್ ಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕಾಯ್ದೆ ತಿದ್ದುಪಡಿ ಮಾಡಲಾಗುತ್ತಿದೆ.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ..

ಆದರೆ, ಇದರಿಂದ ರೈತರಿಗೆ ಮಾರಕವಾಗಲಿದೆ ಎಂಬುದರ ಬಗ್ಗೆ ರಾಜ್ಯ ಸರ್ಕಾರ ಆಲೋಚನೆ ಮಾಡಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲು ಹೊರಟಿರುವುದರಿಂದ ರೈತರಿಗೆ ಇದು ಮಾರಕವಾಗಲಿದೆ ಎಂದರು.

ಹಾಗಾಗಿ ಈ ಕಾಯ್ದೆಗೆ ರಾಜ್ಯ ಸರ್ಕಾರ ಬೆಂಬಲ ನೀಡಬಾರದು. ಒಂದು ವೇಳೆ ಬೆಂಬಲ ಕೊಟ್ಟರೆ ರಾಜ್ಯಾದ್ಯಂತ ರೈತರು ಬೀದಿಗಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details