ಮೈಸೂರು: ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ರೈತ-ದಲಿತ-ಕಾರ್ಮಿಕ ಐಕ್ಯ ಹೋರಾಟ ಸಮಿತಿ ಗಾಂಧಿ ಪ್ರತಿಮೆ ಎದುರು ವಿಧಾನಸಭೆ ಅಧಿವೇಶನ ಮುಗಿಯುವವರೆಗೂ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಹಸಿರುಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ರೈತ ವಿರೋಧಿ ಕಾಯ್ದೆ ಖಂಡಿಸಿ ಅಧಿವೇಶನದ ವೇಳೆ ಹೋರಾಟ: ಬಡಗಲಪುರ ನಾಗೇಂದ್ರ
ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಅಧಿವೇಶನದ ಸಂದರ್ಭದಲ್ಲಿ ರೈತ-ದಲಿತ-ಕಾರ್ಮಿಕ ಐಕ್ಯ ಹೋರಾಟ ಸಮಿತಿ ವತಿಯಿಂದ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಹಸಿರುಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಡಿಸೆಂಬರ್ 7 ರಿಂದ 17 ರವರೆಗೆ ಅಧಿವೇಶನ ನಡೆಯಲಿದೆ. ಈ ವೇಳೆ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ಸುಗ್ರಿವಾಜ್ಞೆ ಮಂಡಿಸುವ ಸಾಧ್ಯತೆ ಇದೆ. ಇದನ್ನು ನಾವು ಖಂಡಿಸುತ್ತೇವೆ. ಕೇಂದ್ರ ಸರ್ಕಾರ ರೈತರ ಜೊತೆ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ಆತಂಕವಾಗುತ್ತದೆ ಎಂದರು.
ಪ್ರಧಾನಿ ಮೋದಿ ಸಂಘಟನೆಗಳಲ್ಲೇ ಒಡಕು ತಂದು ಬ್ರಿಟಿಷರ ರೀತಿ ಆಡಳಿತ ನಡೆಸುತ್ತಿದ್ದಾರೆ. ಈಗಲಾದರೂ ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು. ಕರ್ನಾಟಕದಿಂದಲೂ ದೆಹಲಿ ಚಳುವಳಿಯಲ್ಲಿ ರೈತರು ಭಾಗವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.