ಕರ್ನಾಟಕ

karnataka

ETV Bharat / state

ಜೆಎನ್​ಯು ಘಟನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ - ಜೆಎನ್​ಯು ಘಟನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ

ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಜೆಎನ್​ಯುನಲ್ಲಿ ನಡೆದ ಘಟನೆ ಖಂಡಿಸಿ ಎಐಡಿಎಸ್ಒ, ಎಸ್ಎಫ್​ಐ ಸೇರಿದಂತೆ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜೆಎನ್​ಯು ಘಟನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ
Protest in Mysore condemning JNU incident

By

Published : Jan 6, 2020, 3:09 PM IST

ಮೈಸೂರು:ಜೆಎನ್​ಯು ವಿವಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ನಡೆದ ಹಲ್ಲೆ ಖಂಡಿಸಿ ಎಐಡಿಎಸ್ಒ, ಎಸ್ಎಫ್​ಐ ಸೇರಿದಂತೆ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜೆಎನ್​ಯು ಘಟನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ

ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಜೆಎನ್​ಯು ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೆಎನ್​ಯು ವಿಶ್ವವಿದ್ಯಾಯಲದಲ್ಲಿ ಹೊರಗಿನಿಂದ ಬಂದ ಕಿಡಿಗೇಡಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆನಡೆಸಿದ್ದಾರೆ. ಕ್ಯಾಂಪಸ್​ನಲ್ಲಿರುವ ಹಾಸ್ಟೆಲ್​ಗಳಿಗೆ ಮತ್ತು ವಿದ್ಯಾರ್ಥಿಗಳು ಸೇರುವ ಸ್ಥಳಗಳಲ್ಲಿ ಸಿಕ್ಕ ಸಿಕ್ಕವರನ್ನು ಅದರಲ್ಲೂ ಜೆಎನ್​ಯು ಶುಲ್ಕ ಹೆಚ್ಚಳ ವಿರೋಧಿಸುತ್ತಿರುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮನಬಂದಂತೆ ದಾಳಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಈ ಘಟನೆಯಲ್ಲಿ ಜೆಎನ್​ಯು, ಎಸ್​ಯು ಅಧ್ಯಕ್ಷೆ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಶಿಕ್ಷಕರ ಮೇಲೂ ದಾಳಿ‌ ನಡೆಸಿದ್ದಾರೆ. ಗೂಂಡಾಗಿರಿ ನಡೆಸಿರುವವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

For All Latest Updates

ABOUT THE AUTHOR

...view details