ಮೈಸೂರು:ಅಮೆರಿಕದಲ್ಲಿ ಕಪ್ಪು ಜನಾಂಗದವರ ಮೇಲೆ ನಡೆದ ದೌರ್ಜನ್ಯ ಖಂಡಿಸಿ, ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಕಳೆದ ಒಂದು ವಾರದಿಂದ ಅಮೆರಿಕ ಹೊತ್ತಿ ಉರಿಯುತ್ತಿದೆ. ಆಫ್ರಿಕಾ ಮೂಲದ ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ್ ಎಂಬುವವರನ್ನು ಮಿನಿಯಾ ಪೊಲೀಸ್ ನಗರದಲ್ಲಿ ಶ್ವೇತವರ್ಣೀಯ ಪೊಲೀಸ್ ಅಧಿಕಾರಿಯೊಬ್ಬ ನೆಲಕ್ಕೆ ಕೆಡವಿ ಆತನ ಕತ್ತಿನ ಮೇಲೆ ಮಂಡಿಯಿಟ್ಟು ಉಸಿರುಗಟ್ಟಿ ಸಾಯುವಂತೆ ಮಾಡಿದ್ದಾನೆ. ವರ್ಣ ಭೇದದ ದೌರ್ಜನ್ಯವಾಗಿದ್ದು, ಅಮೆರಿಕದಲ್ಲಿ ಎಲ್ಲ ಕಡೆ ಪ್ರತಿಭಟನೆ ಹಿಂಸಾರೂಪ ತಾಳಿದೆ. ಇದು ಅಮೆರಿಕ ಅಧ್ಯಕ್ಷ ಟ್ರಂಪ್ ವೈಫಲ್ಯಕ್ಕೆ ಸಾಕ್ಷಿ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.