ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದರು.
ಸುತ್ತೂರು ಶಾಖಾ ಮಠದಲ್ಲಿ ಸಿಎಂಗೆ ಪೂರ್ಣಕುಂಭ ಸ್ವಾಗತ - ಸಿಎಂ ಜಂಬೂಸವಾರಿಗೆ ಚಾಲನೆ ಸುದ್ಧಿ
ಸಿಎಂ ಅರಮನೆಗೆ ಐರಾವತ ಬಸ್ನಲ್ಲಿ ಆಗಮಿಸಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ನಂತರ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದಾಗ ಮಠದ ವತಿಯಿಂದ ಸಿಎಂಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಬಳಿಕ ಮಠಾಧೀಶರಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಹಾಗೂ ಸಿಎಂ ಮಠದ ಒಳಗೆ ಇರುವ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಿಎಂಗೆ ಸಚಿವರಾದ ಸಿ.ಟಿ.ರವಿ, ಎಸ್.ಟಿ.ಸೋಮಶೇಖರ್ ಸೇರಿದಂತೆ ಸ್ಥಳೀಯ ಶಾಸಕರು ಸಾಥ್ ನೀಡಿದರು.
ಇಲ್ಲಿಂದ ಸಿಎಂ ಅರಮನೆಗೆ ಐರಾವತ ಬಸ್ನಲ್ಲಿ ಆಗಮಿಸಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ನಂತರ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.