ಮೈಸೂರು: ವಿದೇಶದಿಂದ ನಗರಕ್ಕೆ ಬರುವ ಎಲ್ಲರಿಗೂ ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ವಿದೇಶದಿಂದ ಬಂದವರು ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿರಬೇಕು : ಡಿಸಿ ಕಟ್ಟಪ್ಪಣೆ - ಕ್ವ
ವಿದೇಶದಿಂದ ಹಾಗೂ ಹೊರ ರಾಜ್ಯಗಳಿಂದ ಮೈಸೂರು ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರಿಗೂ ಜಿಲ್ಲಾಡಳಿತದಿಂದ ಕೋವಿಡ್ ಆಸ್ಪತ್ರೆ ಅಥವಾ ನಗರದ ಖಾಸಗಿ ಹೋಟೆಲ್ ನಲ್ಲಿ ಕ್ವಾರಂಟೈನ್ನಲ್ಲಿ ಇಡಲು ಸೂಚಿಸಲಾಗಿದೆ.
ವಿದೇಶದಿಂದ ಹಾಗೂ ಹೊರ ರಾಜ್ಯಗಳಿಂದ ಮೈಸೂರು ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರಿಗೂ ಜಿಲ್ಲಾಡಳಿತದ ವತಿಯಿಂದ ಕೋವಿಡ್ ಆಸ್ಪತ್ರೆ ಅಥವಾ ನಗರದ ಖಾಸಗಿ ಹೋಟೆಲ್ ನಲ್ಲಿ ಕ್ವಾರಂಟೈನ್ನಲ್ಲಿ ಇಡಲು ಸೂಚಿಸಲಾಗಿದೆ. ಇದಕ್ಕಾಗಿ ಮೈಸೂರು ನಗರದಲ್ಲಿ 10 ಹೋಟೆಲ್ಗಳನ್ನು ಬಾಡಿಗೆ ಪಡೆಯಲಾಗಿದ್ದು, ಹೋಟೆಲ್ನಲ್ಲಿ ಇರುವವರು ಅವರೇ ರೂಮ್ ಬಾಡಿಗೆ ನೀಡಬೇಕು, ವಿದೇಶದಿಂದ ಬಂದವರನ್ನು ಮನೆಯಲ್ಲಿ ಕ್ವಾರಂಟೈನ್ ಮಾಡಲು ಅವಕಾಶ ಇಲ್ಲ ಎಂದಿದ್ದಾರೆ.
268 ಮಂದಿ ಕ್ವಾರಂಟೈನ್:ಹೊರ ರಾಜ್ಯಗಳಿಂದ ಮೈಸೂರು ಜಿಲ್ಲೆಗೆ ಆಗಮಿಸಿರುವ ಸುಮಾರು 268 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಇಂದಿನಿಂದ ವಿದೇಶಗಳಿಂದ ಮೈಸೂರು ಜಿಲ್ಲೆಗೆ ಎಷ್ಟು ಜನ ಆಗಮಿಸುತ್ತಾರೆ ಎಂಬ ಬಗ್ಗೆ ಇಂದು ಮಾಹಿತಿ ತಿಳಿಯಲಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು , ಕೋವಿಡ್ ಆಸ್ಪತ್ರೆ ಜೊತೆಗೆ ಹೋಟೆಲ್ಗಳನ್ನೂ ಈಗಾಗಲೇ ಬಾಡಿಗೆಗೆ ಪಡೆಯಲಾಗಿದೆ ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
TAGGED:
mysore corona update