ಕರ್ನಾಟಕ

karnataka

ETV Bharat / state

ಹಾಡ್ಯ ಗ್ರಾಮಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ : ಇಬ್ಬರಿಗೆ ಗಾಯ

ಗ್ರಾಮಸಭೆಯಲ್ಲಿ ಗಲಾಟೆ ಪ್ರಾರಂಭವಾಗುತ್ತಿದ್ದಂತೆ ಪಿಡಿಒ ಕರಿಯಪ್ಪನವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಇನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕರಿಯಪ್ಪ ನಿರ್ಲಕ್ಷ್ಯ ಧೋರಣೆ ಸಂಘರ್ಷಕ್ಕೆ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ..

Quarrel between two groups  in Hadya gram panchayath meeting at Mysore
ಹಾಡ್ಯ ಗ್ರಾಮಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

By

Published : Jan 31, 2022, 4:02 PM IST

Updated : Jan 31, 2022, 4:31 PM IST

ಮೈಸೂರು :ಮನೆ ಹಂಚಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ.

ಹಾಡ್ಯ ಗ್ರಾಮಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮ ಪಂಚಾಯತ್‌ನಲ್ಲಿ ಅಧ್ಯಕ್ಷೆ ಮಹಾದೇವಮ್ಮ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಈ ವೇಳೆ ಬಿಜೆಪಿ ಮುಖಂಡ ವೀರಭದ್ರಪ್ಪ @ಪಾಪು ಮತ್ತು ಕಾಂಗ್ರೆಸ್ ಮುಖಂಡ ರಾಜು ನಡುವೆ ಮನೆ ಹಂಚಿಕೆ ವಿಚಾರಕ್ಕೆ ಮಾತಿನ ಚಕಮಕಿ ಪ್ರಾರಂಭವಾಯಿತು. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಇಡೀ ಗ್ರಾಮ ಸಭೆಯ ಆವರಣ ಬಡಿದಾಟ,ಹೊಡೆದಾಟದ ತಾಣವಾಯಿತು.

ಹಾಡ್ಯ ಗ್ರಾಮಸಭೆಯಲ್ಲಿ

ಮಾತಿಗೆ ಮಾತು ಬೆಳೆದು ಎರಡು ಗುಂಪಿನವರು ಗ್ರಾಮ ಸಭೆಯಲ್ಲಿ ಹಾಕಲಾಗಿದ್ದ ಚೇರು ಹಾಗೂ ಕಲ್ಲುಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ರಾಜಶೇಖರ ಹಾಗೂ ಗಣೇಶ್ ಎಂಬುವರಿಗೆ ಗಾಯಗಳಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನೂ ಕೆಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ‌‌.

ಹಾಡ್ಯ ಗ್ರಾಮಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಇದನ್ನೂ ಓದಿ:ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಗ್ರಾಮಸಭೆಯಲ್ಲಿ ಗಲಾಟೆ ಪ್ರಾರಂಭವಾಗುತ್ತಿದ್ದಂತೆ ಪಿಡಿಒ ಕರಿಯಪ್ಪನವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಇನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕರಿಯಪ್ಪ ನಿರ್ಲಕ್ಷ್ಯ ಧೋರಣೆ ಸಂಘರ್ಷಕ್ಕೆ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 31, 2022, 4:31 PM IST

For All Latest Updates

TAGGED:

ABOUT THE AUTHOR

...view details