ಮೈಸೂರು: ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿನಲ್ಲಿ ಭಾನುವಾರ ಸಂಜೆ ಸುರಿಯುತ್ತಿದ್ದ ಮಳೆಯಲ್ಲೇ ಭಾಷಣ ಮಾಡಿದ್ದಾರೆ. ನೆರೆದಿದ್ದ ಜನರು ಕೂಡ ಕುರ್ಚಿಗಳ ಆಶ್ರಯ ಪಡೆದು ಭಾಷಣ ಕೇಳಿದ್ದಾರೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೇರಳದ ಮೂಲಕ ಕರ್ನಾಟಕಕ್ಕೆ ಯಾತ್ರೆಯು ತಲುಪಿದೆ. ಮೂರು ದಿನಗಳಿಂದ ಚಾಮರಾಜನಗರ ಹಾಗೂ ಮೈಸೂರು ಭಾಗದಲ್ಲಿ ಯಾತ್ರೆ ಸಾಗುತ್ತಿದೆ. ಇಂದು ಮೈಸೂರಿನಲ್ಲಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಮಳೆ ಸುರಿದಿದ್ದು, ರಾಹುಲ್ ಗಾಂಧಿ ಸೇರಿ ಎಲ್ಲ ನಾಯಕರು ಮಳೆಯಲ್ಲೇ ಸಭೆ ನಡೆಸಿದ್ದಾರೆ.