ಮೈಸೂರು: ಗಾಂಧಿ ಜಯಂತಿ ಅಂಗವಾಗಿ ನಂಜನಗೂಡು ತಾಲೂಕಿನ ಬದನವಾಳು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.
ಗಾಂಧಿ ಜಯಂತಿ ಹಿನ್ನೆಲೆ ಭಾರತ್ ಜೋಡೋ ಪಾದಯಾತ್ರೆಗೆ ಇಂದು ಬೆಳಗ್ಗೆ ಬ್ರೇಕ್ ನೀಡಲಾಗಿದೆ. ಗಾಂಧಿ ಪುತ್ಥಳಿಗೆ ನಮನ ಸಲ್ಲಿಸಿದ ಬಳಿಕ ಕಾಂಗ್ರೆಸ್ ನಾಯಕರು ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ತೆರಳಿ, ಅಲ್ಲಿನ ಸಿಬ್ಬಂದಿ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ರಾಹುಲ್ ಗಾಂಧಿ ಜೊತೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಹರಿಪ್ರಸಾದ್ ಮತ್ತು ಕೆ ಹೆಚ್ ಮುನಿಯಪ್ಪ ಸೇರಿದಂತೆ ಹಲವರು ಇದ್ದರು.