ಮೈಸೂರು : ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಇಂದು ರಾಜ್ಯ ನಾಯಕರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ - ಈಟಿವಿ ಭಾರತ ಕನ್ನಡ
ಮೈಸೂರಿನಲ್ಲಿ ಭಾರತ್ ಜೋಡೋ ಯಾತ್ರೆ ಕೈಗೊಳ್ಳುತ್ತಿರುವ ರಾಹುಲ್ ಗಾಂಧಿ,ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ
ಇಂದು ಬೆಳಗ್ಗೆ ಮೈಸೂರಿನಿಂದ ಶ್ರೀರಂಗಪಟ್ಟಣ ವರೆಗೆ ಪಾದಯಾತ್ರೆ ನಡೆಸಿದ ರಾಹುಲ್ ಗಾಂಧಿ, ಶ್ರೀರಂಗಪಟ್ಟಣದಲ್ಲಿ ಬೆಳಗಿನ ಪಾದಯಾತ್ರೆಯನ್ನು ಪೂರ್ಣಗೊಳಿಸಿ ಅಲ್ಲಿಂದ ವಾಹನದಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಅಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಎಂ.ಬಿ ಪಾಟೀಲ್ ಜೊತೆಯಲ್ಲಿದ್ದರು.
ಇದನ್ನೂ ಓದಿ :ಬಿಜೆಪಿಗರು ಮೊದಲು ತಮ್ಮನ್ನು ಜೋಡಿಸಿಕೊಳ್ಳುವ ಕೆಲಸ ಮಾಡಿಕೊಳ್ಳಲಿ: ಡಿಕೆಶಿ ತಿರುಗೇಟು