ಕರ್ನಾಟಕ

karnataka

ETV Bharat / state

ನಂಜನಗೂಡು ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ, ವಿಶೇಷ ಪೂಜೆ - ಈಟಿವಿ ಭಾರತ ಕನ್ನಡ ​​​

ಕಾಂಗ್ರೆಸ್​ ನೇತಾರ ರಾಹುಲ್​ ಗಾಂಧಿ, ಸಿದ್ದರಾಮಯ್ಯ, ಹಾಗೂ ಡಿಕೆ ಶಿವಕುಮಾರ್​ ನಂಜನಗೂಡಿನ ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

rahul-gandhi-visited-nanjangudu-temple
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ

By

Published : Oct 2, 2022, 8:45 PM IST

ಮೈಸೂರು : ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ನಂಜನಗೂಡು ಬಳಿಯ ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ರಾಹುಲ್ ಅಲ್ಲಿಂದ ನೇರವಾಗಿ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಶ್ರೀಕಂಠೇಶ್ವರನಿಗೆ ಬಿಲ್ವಪತ್ರೆ ಅರ್ಚನೆ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ

ಅಲ್ಲಿಂದ ನೇರವಾಗಿ ತಾಂಡವಪುರ ಬಳಿ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿ ಕಾಲ್ನಡಿಗೆಯಲ್ಲಿ ಬಂಡಿಪಾಳ್ಯ ಬಳಿ ಸಂವಾದದಲ್ಲಿ ಭಾಗಿಯಾದರು. ಇಂದು ರಾತ್ರಿ ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ವಾಸ್ತವ್ಯ ಹೂಡಲಿದ್ದು, ಬೆಳಗ್ಗೆ ಮೈಸೂರು ನಗರದಿಂದ ಭಾರತ್ ಜೋಡೋ ಪಾದಯಾತ್ರೆ ಆರಂಭವಾಗಲಿದೆ.

ಇದನ್ನೂ ಓದಿ :ಭಾರತ್ ಜೋಡೋ ಯಾತ್ರೆ.. ರಾಹುಲ್ ಗಾಂಧಿಗೆ 10 ಪ್ರಶ್ನೆಗಳ ಸವಾಲೆಸೆದ ರವಿಕುಮಾರ್

ABOUT THE AUTHOR

...view details