ಮೈಸೂರು: ತೌಕ್ತೆ ಚಂಡಮಾರುತ ಪರಿಣಾಮ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದ ಜಿಟಿಜಿಟಿ ಮಳೆ ಆರಂಭವಾಗಿದ್ದು, ವ್ಯಾಪಾರಿಗಳು ಕಂಗಾಲಾಗಿದ್ದಾರೆ.
ತೌಕ್ತೆ ಚಂಡಮಾರುತದ ಎಫೆಕ್ಟ್... ಮೈಸೂರಿನಲ್ಲಿ ಜಿಟಿಜಿಟಿ ಮಳೆ
ಮೈಸೂರು ಜಿಲ್ಲೆಯಾದ್ಯಂತ ಬೆಳಗ್ಗೆಯಿಂದ ಜಿಟಿಜಿಟಿ ಮಳೆ ಆರಂಭವಾಗಿದೆ.
ಮೈಸೂರಿನಲ್ಲಿ ಜಿಟಿಜಿಟಿ ಮಳೆ
ಬೆಳ್ಳಂಬೆಳಗ್ಗೆ ಎದ್ದೇಳುತ್ತಿದ್ದಂತೆ ಜನರಿಗೆ ಮಳೆಯ ದರ್ಶನವಾಗಿದೆ. ರಸ್ತೆ ಬದಿ ಹಾಗೂ ದಿನಸಿ ಅಂಗಡಿಗಳ ವ್ಯಾಪಾರಕ್ಕೆ ಮಳೆಯಿಂದ ಅಡ್ಡಿಯಾಗಿದ್ದು, ವ್ಯಾಪಾರಿಗಳ ಮುಖದಲ್ಲಿ ಬೇಸರ ಮೂಡಿದೆ. ಇನ್ನು ಮಳೆಯಿಂದ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದ್ದು, ಲಾಕ್‌ಡೌನ್ ಪಾಲನೆಗೆ ಮತ್ತಷ್ಟು ಅನುಕೂಲ ಮಾಡಿಕೊಟ್ಟಿದೆ.
ಲಾಕ್‌ಡೌನ್ ಪರಿಣಾಮ ಜನರು ಕೃಷಿ ಚಟುವಟಿಕೆಗಳಲ್ಲಿ ಮತ್ತಷ್ಟು ತೊಡಗಿಕೊಂಡಿದ್ದಾರೆ. ಹಾಗಾಗಿ ಜಿಲ್ಲೆಯಾದ್ಯಂತ ಮಳೆ ಆರಂಭವಾಗುತ್ತಿರುವುದರಿಂದ ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿದೆ.