ಕರ್ನಾಟಕ

karnataka

ETV Bharat / state

ಮೈಸೂರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಅನಾರೋಗ್ಯದಿಂದ ಬಯಲಾದ ಪ್ರಕರಣ - ಮೈಸೂರು ಅಪ್ರಾಪ್ತೆಯ ಮೇಲೆ ಅತ್ಯಾಚಾರ

9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿದ್ದು, ಬಾಲಕಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

rape-of-a-minor-girl-in-mysore
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

By

Published : Aug 31, 2022, 1:48 PM IST

ಮೈಸೂರು:ಸಾಂಸ್ಕೃತಿಕ ನಗರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿರುವ ಪ್ರಕರಣ ನಡೆದಿದೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಕಾಮುಕರು ಪೈಶಾಚಿಕ ಕೃತ್ಯವೆಸಗಿದ್ದು, ಬಾಲಕಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೈಸೂರಿನ ವಿ‌.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಡಿಜಿಟಲ್ ರೇಪ್​ ಕೇಸ್​.. 65ರ ವೃದ್ಧನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್​​

ABOUT THE AUTHOR

...view details