ಮೈಸೂರು: ವರುಣ ಕ್ಷೇತ್ರ ತಂದೆಗೆ ಅದೃಷ್ಟದ ಕ್ಷೇತ್ರ. ಇಲ್ಲಿಗೆ ಬಂದು ತಮ್ಮ ಕೊನೆಯ ಚುನಾವಣೆಯನ್ನು ಗೆಲ್ಲಲಿ ಎಂಬುದು ನನ್ನ ಒತ್ತಾಯ, ಇಲ್ಲಿ ಗೆದ್ದರೆ ತಂದೆಗೆ ಮುಖ್ಯಮಂತ್ರಿ ಆಗುವ ಅವಕಾಶವಿದ್ದು, ಅವರು ವರುಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ನಾನು ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ರಾಜ್ಯದ ಹಲವು ನಾಯಕರುಗಳು ಮತ್ತು ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಆಹ್ವಾನ ನೀಡುತ್ತಿದ್ದಾರೆ. ಆದರೆ ಅಪ್ಪ ಈವರೆಗೆ ಯಾವುದೇ ಕ್ಷೇತ್ರವನ್ನು ಅಂತಿಮಗೊಳಿಸಿಲ್ಲ. ಹಾಗಾಗಿ ಅವರು ವರುಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕೆಂಬುದು ನನ್ನ ಒತ್ತಾಯವಾಗಿದೆ. ಜೊತೆಗೆ ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ದೃಷ್ಟಿಯಿಂದ ವರುಣ ಕ್ಷೇತ್ರ ಸುರಕ್ಷಿತ ಎಂದರು.
ವರುಣ ಕ್ಷೇತ್ರ ತಂದೆಯವರಿಗೆ ಅದೃಷ್ಟದ ಕ್ಷೇತ್ರವಾಗಿದ್ದು, ಸಿದ್ದರಾಮಯ್ಯ ಕೊನೆಯ ಚುನಾವಣೆಯನ್ನು ಎದುರಿಸುತ್ತಿದ್ದು ಅವರು ವರುಣದಿಂದ ಸ್ಪರ್ಧೆ ಮಾಡಲಿ ಎಂಬುದು ನನ್ನ ವೈಯಕ್ತಿಕ ಒತ್ತಾಯವಾಗಿದ್ದು ಅಪ್ಪ ವರುಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಕ್ಷೇತ್ರ ತ್ಯಾಗಕ್ಕೆ ನಾನು ಸಿದ್ಧನಿದ್ದೇನೆ.