ಕರ್ನಾಟಕ

karnataka

ETV Bharat / state

ಗೋಡೆ ಕುಸಿತದಿಂದ ಮೃತಪಟ್ಟಿದ್ದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ

ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಅವರ ಕುಟುಂಬಕ್ಕೆ ಸರ್ಕಾರದದಿಂದ 5 ಲಕ್ಷ ರೂ. ಪರಿಹಾರ ಧನ ಘೋಷಣೆ ಮಾಡಲಾಗಿದೆ.

ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನ ವಿತರಣೆ

By

Published : Aug 9, 2019, 6:14 PM IST

ಮೈಸೂರು:ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಮೃತಪಟ್ಟಿದ್ದ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಧನ ಘೋಷಣೆ ಮಾಡಲಾಗಿದೆ.

ಕಳೆದ ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಗೆ ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಬಳಿಯ ಅಬ್ಬೂರು ಹಾಡಿಯಲ್ಲಿ ಮನೆಯೊಂದರ ಗೋಡೆ ಕುಸಿದಿತ್ತು. ಈ ವೇಳೆ ಮನೆಯೊಳಗಿದ್ದ ಗಣೇಶ್ ಅಲಿಯಾಸ್ ಗಣಪತಿ (35) ಎಂಬವರು ಸಾವನ್ನಪ್ಪಿದ್ದರು. ಇದೀಗ ಆತನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಧನವನ್ನ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆಯ ಮೇರೆಗೆ ಶಾಸಕ ರಾಮದಾಸ್ ವಿತರಿಸಿದರು.‌

ಅಲ್ಲದೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಶಾಸಕ ರಾಮದಾಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details