ಮೈಸೂರು : ಬೆಂಗಳೂರು - ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಇಂದು ಸಂಸದ ಪ್ರತಾಪ ಸಿಂಹ ಅವರು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದ ಕೆಲವು ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವಂತೆ ಕೇಂದ್ರ ಸಚಿವ ಗಡ್ಕರಿ ಮನವಿ ಸಲ್ಲಿಸಿದರು.
- ಚೆನ್ನರಾಯಪಟ್ಟಣ-ಹೊಳೆನರಸೀಪುರ-ಅರಕಲಗೂಡು-ಕೊಡ್ಲಿಪೇಟೆ-ಮಡಿಕೇರಿ-ವಿರಾಜಪೇಟೆ ಮಾರ್ಗವಾಗಿ ಮಾಕುಟ್ಟ (ಕೇರಳ ಬಾರ್ಡರ್) ಸಂಪರ್ಕಿಸುವ ರಸ್ತೆ.
- ಮೈಸೂರು—ಹುಣಸೂರು-ಗೋಣಿಕೊಪ್ಪ ಮಾರ್ಗವಾಗಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
- ಕೆಳಪಟ್ಟ-ಮಾನಂದವಾಡಿ-ಹೆಚ್.ಡಿ.ಕೋಟೆ-ಜಯಪುರ ಮಾರ್ಗವಾಗಿ ಮೈಸೂರು ಸಂಪರ್ಕಿಸುವ ರಸ್ತೆ.
- ಶ್ರೀರಂಗಪಟ್ಟಣ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ಮಾರ್ಗವಾಗಿ ಅರಸೀಕೆರೆ ಸಂಪರ್ಕಿಸುವ ರಸ್ತೆ.
- ಮಳವಳ್ಳಿಯಿಂದ ಮೈಸೂರು ಸಂಪರ್ಕಿಸುವ ರಸ್ತೆ.
- ಪಾಂಡವಪುರ ಅರಸೀಕೆರೆ ಮಾರ್ಗವಾಗಿ ಕೆ.ಆರ್.ಪೇಟೆ ಸಂಪರ್ಕಿಸುವ ರಸ್ತೆ.
ಇದನ್ನೂ ಓದಿ :ಬೆಂಗಳೂರು- ಮೈಸೂರು ದಶಪಥ ರಸ್ತೆಯಿಂದ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪೂರಕ ವಾತಾವರಣ