ಮೈಸೂರು : ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಇಂದು ನಗರದ ಸಿಸಿಬಿ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ಇಬ್ಬರು ಆರೋಪಿತರನ್ನು ಬಂಧಿಸಿದ್ದು, 6 ಜನ ಯುವತಿಯರನ್ನು ರಕ್ಷಣೆ ಮಾಡಿ, 9,150 ರೂ. ಹಣವನ್ನು ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರದ ವಿ.ವಿ.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳಿದಾಸ ರಸ್ತೆ, 8 ನೇ ಕ್ರಾಸ್‍ನಲ್ಲಿರುವ ಮನೆಯೊಂದರ ಮಹಡಿಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಸ್ಥಳೀಯ ಯುವತಿಯರಿಗೆ ಹಣದ ಆಮಿಷವೊಡ್ಡಿ ಕರೆಸಿಕೊಂಡು ವೇಶ್ಯಾವಾಟಿಕೆಗೆ ತಳ್ಳಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ
ಇಬ್ಬರು ಪುರುಷ ಗಿರಾಕಿಗಳೂ ಸಹ ಹಾಜರಿದ್ದು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.