ಕರ್ನಾಟಕ

karnataka

ETV Bharat / state

ಅಮಾವಾಸ್ಯೆ ಹಿನ್ನೆಲೆ : ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ - Mysure DC abhiram g Shankar news

ಅಮಾವಾಸ್ಯೆ ಹಿನ್ನೆಲೆ ಬುಧವಾರ 19 ರಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

Chamundi hills
Chamundi hills

By

Published : Aug 17, 2020, 12:26 PM IST

ಮೈಸೂರು: ಅಮಾವಾಸ್ಯೆ ದಿನದಂದು ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಹಿನ್ನೆಲೆಯಲ್ಲಿ ಅಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ತಿಳಿಸಿದ್ದಾರೆ.

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬುಧವಾರ 19 ರಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಜೊತೆಗೆ ಉತ್ತನಹಳ್ಳಿ ದೇವಾಲಯಕ್ಕೂ‌ ನಿಷೇಧ ಹೇರಲಾಗಿದೆ. ಅಂದು ಸಾರ್ವಜನಿಕವಾಗಿ ಪ್ರಸಾದ ತಯಾರಿಕೆ ಹಾಗೂ ವಿತರಣೆಗೆ ನಿರ್ಬಂಧ ವಿಧಿಸಲಾಗಿದ್ದು, ಎಂದಿನಂತೆ ದೇವಸ್ಥಾನದ ಒಳಗೆ ಪೂಜಾ ವಿಧಾನಗಳು ನಡೆಯುತ್ತದೆ. ಆದರೆ, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details