ಮೈಸೂರು:ಎದುರಿನಿಂದ ಬರುತ್ತಿದ್ದ ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದುರ್ಘಟನೆ ನಗರದ ರಮಾಬಾಯಿ ನಗರದಲ್ಲಿ ನಡೆದಿದೆ.
ಬೈಕ್ಗೆ ಡಿಕ್ಕಿ ಹೊಡೆದು ಸವಾರನನ್ನು ಎಳೆದೊಯ್ದ ಲಾರಿ: ತಲೆ ಅಪ್ಪಚ್ಚಿಯಾಗಿ ವ್ಯಕ್ತಿ ಸಾವು
ಲಾರಿ ಚಕ್ರಕ್ಕೆ ಬೈಕ್ ಸಿಲುಕಿ ಸವಾರನ ತಲೆಯ ಭಾಗ ಅಪ್ಪಚ್ಚಿಯಾಗಿದೆ. ಲಾರಿ ಚಕ್ರಕ್ಕೆ ಸಿಲುಕಿದ ಬೈಕ್ ಸವಾರನನ್ನು ಲಾರಿ ಬಹಳಷ್ಟು ದೂರದವರೆಗೆ ಎಳೆದೊಯ್ದಿದೆ. ಈ ವೇಳೆ ತಲೆ ಭಾಗ ಛಿದ್ರವಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಬೈಕ್ಗೆ ಲಾರಿ ಡಿಕ್ಕಿ
ಮೃತ ಬೈಕ್ ಸವಾರನ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಎದುರಿನಿಂದ ಬರುತ್ತಿದ್ದ ಬೈಕ್ಗೆ ಲಾರಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಲಾರಿ ಚಕ್ರಕ್ಕೆ ಬೈಕ್ ಸಿಲುಕಿ ಬೈಕ್ ಸವಾರನ ತಲೆಯ ಭಾಗ ಛಿದ್ರವಾಗಿದೆ. ಲಾರಿ ಚಕ್ರಕ್ಕೆ ಸಿಲುಕಿದ ಬೈಕ್ ಸವಾರನನ್ನು ಲಾರಿ ಬಹಳಷ್ಟು ದೂರದವರೆಗೆ ಎಳೆದೊಯ್ದಿದೆ. ಈ ವೇಳೆ ತಲೆ ಭಾಗ ಛಿದ್ರವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.