ಮೈಸೂರು: ಮದುವೆ ದಿಬ್ಬಣಕ್ಕೆ ಹೊರಟಿದ್ದ ಟಾಟಾ ಏಸ್ ಪಲ್ಟಿ ಹೊಡೆದು ನಾಲೆಗೆ ಬಿದ್ದಿರುವ ಘಟನೆಯ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಸಮೀಪ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 25 ಜನ ಗಾಯಗೊಂಡಿದ್ದಾರೆ.
ನಾಲೆಗೆ ಬಿದ್ದ ಮದುವೆ ದಿಬ್ಬಣಕ್ಕೆ ಹೊರಟಿದ್ದ ಟಾಟಾ ಏಸ್ ಕೆ.ಆರ್.ನಗರದ ಸಾರ್ವಜನಿಕ ಆಸ್ಪತ್ರೆಗೆ ವಧು ಸೇರಿ 25ಕ್ಕೂ ಹೆಚ್ಚಿನ ಜನರನ್ನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 25ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿದ್ದು, ಇವರಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ.
ವಧು ಕೂಡ ಇದೇ ವಾಹನದಲ್ಲಿ ಇದ್ದ ಪರಿಣಾಮ ಅವರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಲ್ಲಿ ಒಂದೇ ಕುಟುಂಬದ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆ.ಆರ್ .ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಆಗಮಿಸಿ ವಿವರ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಓದಿ : ಕ್ಯಾಂಟರ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಬೈಕ್ ಸವಾರ ಸಾವು: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ