ಮೈಸೂರು:ಐಎಂಎ ಹಗರಣದಲ್ಲಿ ಶಾಸಕ ರೋಷನ್ ಬೇಗ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಲಾಗಿದೆ. ಅವರು ಏನೇ ಹೇಳೊದಿದ್ರೂ ಅದನ್ನು ಎಸ್ಐಟಿ ಮುಂದೆಯೇ ಹೇಳಲಿ ಎಂದರು.
ರೋಷನ್ ಬೇಗ್ ಏನು ಹೇಳಬೇಕೊ ಅದನ್ನು ಎಸ್ಐಟಿ ಮುಂದೆಯೇ ಹೇಳಲಿ: ಸಿದ್ದರಾಮಯ್ಯ - Kannada news
ಐಎಂಎ ಹಗರಣದಲ್ಲಿ ಶಾಸಕ ರೋಷನ್ ಬೇಗ್ ಹೇಳಿಕೆಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಲಾಗಿದ್ದು, ಅವರು ಏನು ಹೇಳಬೇಕೊ ಅದನ್ನು ಎಸ್ಐಟಿ ಮುಂದೆಯೇ ಹೇಳಲಿ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ತಮ್ಮ ನಿವಾಸದ ಎದುರು ಮಾತನಾಡಿದ ಸಿದ್ದರಾಮಯ್ಯ ಅವರು, ಶಾಸಕ ರೋಷನ್ ಬೇಗ್ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಅದೇನಿದ್ರೂ ಎಸ್ ಐಟಿ ಗೆ ಬಿಟ್ಟ ವಿಷಯ. ಎಸ್ ಐಟಿ ರಚನೆಯಾಗಿದೆ ಎಂದು ತಿಳಿಸಿದರು.
ನಂತರ ಎಐಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿ, ರಾಹುಲ್ ಗಾಂಧಿಯವರು ಅಧ್ಯಕ್ಷರಾಗಿ ಮುಂದುವರೆಯುತ್ತಾರೆ. ಕಾಂಗ್ರೆಸ್ನಲ್ಲಿ ರಾಹುಲ್ ಬಿಟ್ಟರೆ ಅಧ್ಯಕ್ಷ ಸ್ಥಾನಕ್ಕೆ ಪರ್ಯಾಯವಾಗಿ ಯಾರೂ ಇಲ್ಲವೆಂದು ಸ್ಪಷ್ಟಪಡಿಸಿದರು.