ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರೀತಿ ಮುಂದಿನ ದಿನಗಳಲ್ಲಿ ಬಿ.ವೈ. ವಿಜಯೇಂದ್ರ ರಾಜ್ಯದ ರಾಜಾಹುಲಿ ಆಗಲಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಜೆಎಸ್ಎಸ್ ಬಡಾವಣೆಯಲ್ಲಿ ಏರ್ಪಡಿಸಿದ್ದ ಮಹಾಸಭಾದ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಅನೇಕ ಪೆಟ್ಟು ತಿಂದ ಯಡಿಯೂರಪ್ಪ ಅವರು 40 ವರ್ಷದ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಅತ್ಯಂತ ಯಶಸ್ವಿ ಸಿಎಂ ಕೂಡ ಆಗಿದ್ದಾರೆ. ತಂದೆ ಹಾಕಿಕೊಟ್ಟ ಹಾದಿಯಲ್ಲೇ ಪುತ್ರ ಬಿ.ವೈ. ವಿಜಯೇಂದ್ರ ಸಾಗುತ್ತಿದ್ದಾರೆ ಎಂದು ಗುಣಗಾನ ಮಾಡಿದರು.