ಮೈಸೂರು:ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಡಿ ಕೋಟೆಯಲ್ಲಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಹಾಗೂ ಅರಣ್ಯಗಳಲ್ಲಿ ಸಫಾರಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆ ಜಿಲ್ಲೆಯ ಹೆಚ್ಡಿ ಕೋಟೆ ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಅಲ್ಲದೇ, ದಮ್ಮನಕಟ್ಟೆ ಅರಣ್ಯ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನ, ಬಂಡೀಪುರ ಹಾಗೂ ಕಬಿನಿ ಜಲಾಶಯಕ್ಕೆ ಪ್ರವಾಸಿಗರು ಅಧಿಕ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಆದ್ದರಿಂದ ಸೋಂಕು ಹೆಚ್ಚಾಗಿ ಹರಡುವ ಸಾಧ್ಯತೆ ಇದೆ.
ಆದ್ದರಿಂದ ಜಿಲ್ಲಾಡಳಿತ ತಾಲೂಕಿನಲ್ಲಿರುವ ಹೋಮ್ ಸ್ಟೇ , ರೆಸಾರ್ಟ್, ಲಾಡ್ಜ್, ವಸತಿ ಗೃಹಗಳಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಅಧಿಕವಾದ್ದರಿಂದ ನಿಷೇಧ ಮಾಡಲಾಗಿದೆ. ಮುಖ್ಯವಾಗಿ ಹೊರ ರಾಜ್ಯದಿಂದ ಮತ್ತು ವಿದೇಶದಿಂದ ಬರುವವರಿಗೆ ನಿಷೇಧ ವಿಧಿಸಿದ್ದು, ಬುಕ್ಕಿಂಗ್ಗಳನ್ನು ರದ್ದುಗೊಳಿಸುವಂತೆ ಸೂಚಿಸಲಾಗಿದೆ.
ಹೊರರಾಜ್ಯ ಮತ್ತು ವಿದೇಶದಿಂದ ಆಗಮಿಸುವ ಪ್ರವಾಸಿಗರು ಮುಂದಿನ ಆದೇಶದವರೆಗೂ ಹೆಚ್.ಡಿ.ಕೋಟೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.