ಮೈಸೂರು:ಶಾಸಕ ಸಾ.ರಾ. ಮಹೇಶ್ ಅವರ ಪತ್ನಿಯ ಹೆಸರಿನಲ್ಲಿರುವ ಸಾ.ರಾ. ಕಲ್ಯಾಣ ಮಂಟಪವನ್ನು ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಪ್ರಾದೇಶಿಕ ಆಯುಕ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದಾರೆ. ಈ ತಂಡ ಶನಿವಾರ ಸ್ಥಳ ಸರ್ವೇ ಮಾಡಿ ವರದಿಯನ್ನು ಪ್ರಾದೇಶಿಕ ಆಯುಕ್ತರಾದ ಜಿ.ಸಿ. ಪ್ರಕಾಶ್ ಅವರಿಗೆ ಸಲ್ಲಿಸಿತ್ತು.
ಆದರೆ ಈ ವರದಿಯನ್ನು ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರಿಗೆ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರು ಭಾನುವಾರ ವಾಪಸ್ ಕಳುಹಿಸಿದ್ದರು. ಈ ವರದಿ ಇಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ, ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ.