ಕರ್ನಾಟಕ

karnataka

ETV Bharat / state

ಕೃಷಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ​ ಬಿ.ಸಿ.ಪಾಟೀಲ್ ಸ್ಪಷ್ಟನೆ ಕೊಡಲಿ: ಸಾ.ರಾ.ಮಹೇಶ್ - SA RA Mahesh

ಕೃಷಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್​ ಸ್ಪಷ್ಟನೆ ನೀಡಬೇಕು ಎಂದು ಟ್ವಿಟರ್​ನಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ .

sdsd
ಬಿ.ಸಿ.ಪಾಟೀಲ್ ವಿರುದ್ಧ ಸಾರಾ ಮಹೇಶ್ ಆರೋಪ

By

Published : Jan 20, 2021, 7:29 PM IST

ಮೈಸೂರು: ಕೃಷಿ ಇಲಾಖೆಯಲ್ಲಿ ವರ್ಗಾವಣೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ಸಿಎಂಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಕೃಷಿ ಸಚಿವರು ಸ್ಪಷ್ಟನೆ ನೀಡಬೇಕೆಂದು ಟ್ವಿಟರ್​ನಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಸಮಸ್ಯೆ ಬಗೆಹರಿಸದಿದ್ದರೆ ಅಧಿಕಾರಿಗಳು ಸಾಮೂಹಿಕ ದಯಾ ಮರಣಕ್ಕೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಕೂಡಲೇ ಕೃಷಿ ಸಚಿವರ ರಾಜೀನಾಮೆಯನ್ನು ಸಿಎಂ ಪಡೆಯಬೇಕೆಂದು ಆಗ್ರಹಿಸಿದ್ದಾರೆ.

ಬಿ.ಸಿ.ಪಾಟೀಲ್ ವಿರುದ್ಧ ಸಾ.ರಾ.ಮಹೇಶ್ ಆರೋಪ

ದುರ್ಬಲ ಮನಸಿನ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ರೈತ ಸಮುದಾಯವನ್ನು ಗೇಲಿ ಮಾಡಿರುವ ಸಚಿವ ಬಿ.ಸಿ.ಪಾಟೀಲ್ ರೈತರ ಕ್ಷಮೆ ಕೇಳಬೇಕು. ಜೊತೆಗೆ ಕೃಷಿ ಇಲಾಖೆಯ ಸಿಬ್ಬಂದಿ ಮಾಡಿರುವ ಲಂಚದ ಆರೋಪದ ಪತ್ರದ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ABOUT THE AUTHOR

...view details