ಕರ್ನಾಟಕ

karnataka

ETV Bharat / state

ಚಾಮುಂಡಿಬೆಟ್ಟದ ತಪ್ಪಲಿನ ಆಸ್ತಿ ವಿವಾದ : ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ - ರೋಹಿಣಿ ಸಿಂಧೂರಿ

ಚಾಮುಂಡಿ ಬೆಟ್ಟದ ತಪ್ಪಲಿನ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಸರ್ಕಾರ ಮತ್ತು ಭೂ ಮಾಲೀಕರ ನಡುವೆ ನಡೆಯುತ್ತಿದ್ದ ಕಾನೂನು ಸಮರ ಅಂತ್ಯಗೊಂಡಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

SC Rejected Appeal
ಮೇಲ್ಮನವಿ ತಿರಸ್ಕರಿಸಿದ ಸುಪ್ರಿಂ ಕೋರ್ಟ್

By

Published : Jul 27, 2021, 12:02 PM IST

ಮೈಸೂರು/ನವದೆಹಲಿ: ಚಾಮುಂಡಿಬೆಟ್ಟದ ತಪ್ಪಲಿನ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿಯ ಭೂ ಮಾಲೀಕತ್ವ ವಿವಾದಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ‌.

ಭೂಮಿ ಮಹಾರಾಜರ ಖಾಸಗಿ ಆಸ್ತಿಯೆಂದು ಹೈಕೋರ್ಟ್ ವಿಭಾಗೀಯ ಪೀಠ ಕಳೆದ ವರ್ಷ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅಂದಿನ ಡಿಸಿ ರೋಹಿಣಿ ಸಿಂಧೂರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಉದಯ್ ಲಲಿತ್ ಹಾಗೂ ಅಜಯ್ ರಸ್ತೋಗಿ ಅವರು, ಇದು ವಿಚಾರಣೆಗೆ ಯೋಗ್ಯವಲ್ಲವೆಂದು ಮೇಲ್ಮನವಿ ತಿರಸ್ಕರಿಸಿದ್ದಾರೆ.

ಮೇಲ್ಮನವಿ ತಿರಸ್ಕರಿಸಿದ ಸುಪ್ರಿಂ ಕೋರ್ಟ್

ಓದಿ : CAA ಪ್ರತಿಭಟನೆ ವೇಳೆ ಗೋಲಿಬಾರ್ : ತಪ್ಪಿತಸ್ಥರ ವಿರುದ್ಧ ಕೈಗೊಂಡ ಕ್ರಮದ ವಿವರ ಕೇಳಿದ ಹೈಕೋರ್ಟ್

ಸುಪ್ರೀಂ ಕೋರ್ಟ್ ತೀರ್ಪಿನಿಂದ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿ ಈ ಮೂರು ಸರ್ವೆ ನಂಬರ್​ಗಳಿಗೆ ಸೇರಿದ 850 ಎಕರೆಯಷ್ಟು ಭೂಮಿಯ ಮಾಲೀಕತ್ವಕ್ಕೆ ಸಂಬಂಧಪಟ್ಟಂತೆ ಕಳೆದ ಎರಡು ದಶಕಗಳಿಂದ ಸರ್ಕಾರ ಮತ್ತು ಭೂ ಮಾಲೀಕರ ನಡುವೆ ನಡೆಯುತ್ತಿದ್ದ ಕಾನೂನು ಸಮರಕ್ಕೆ ತೆರೆ ಬಿದ್ದಿದೆ.

ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಹಿನ್ನೆಲೆ ವಿವಾದಿತ ಭೂಮಿ ಮೈಸೂರು ಮಹಾರಾಜರ ಖಾಸಗಿ ಆಸ್ತಿ ಎಂಬುದು ಅಧಿಕೃತವಾಗಿದೆ.

ABOUT THE AUTHOR

...view details