ಮೈಸೂರು: ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ ಒಳಚರಂಡಿ ಕಾರ್ಮಿಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಪಾಲಿಕೆ ಒಳಚರಂಡಿ ನೌಕರರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ - Civil workers protest
ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಒಳಚರಂಡಿ ನೌಕರರನ್ನು ಕಾಯಂಗೊಳಿಸುವಂತೆ ನೌಕರರು ಪ್ರತಿಭಟನೆ ನಡೆದಿದ್ದಾರೆ. ಸುಮಾರು 231 ಮಂದಿ ನೌಕಕರು ಪ್ರತಿನಿತ್ಯ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಬೆಳಗಿನ ಉಪಹಾರ ಸೇರಿ ಹುದ್ದೆಯನ್ನು ಕಾಯಂಗೊಳಿಸಲು ಆಗ್ರಹಿಸಿದರು.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 231 ಜನ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿ 65 ಪಾಲಿಕೆಯ ವಾರ್ಡ್ಗಳಿದ್ದು, 2,700 ಕಿಲೋ ಮೀಟರ್ ಒಳ ಚರಂಡಿ ವ್ಯವಸ್ಥೆ ಇದೆ. ಇದಕ್ಕಾಗಿ ಪ್ರತಿದಿನವೂ 231 ಜನ ಗುತ್ತಿಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಇವರನ್ನು ಕಾಯಂಗೊಳಿಸುವಂತೆ ಮತ್ತು ಒಳಚರಂಡಿ ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.