ಕರ್ನಾಟಕ

karnataka

ETV Bharat / state

ದಿವ್ಯಾಂಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದಂಡದ ಜೊತೆ 10 ವರ್ಷ ಕಠಿಣ ಸಜೆ - kannada news

16 ವರ್ಷದ ಬುದ್ದಿಮಾಂದ್ಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 10 ವರ್ಷ ಕಠಿಣ ಸಜೆ ಮತ್ತು 30 ಸಾವಿರ ರೂ ದಂಡವನ್ನು ವಿಧಿಸಿ ತೀರ್ಪು ನೀಡಿದೆ.

ಅಂಗವಿಕಲೆ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

By

Published : Jun 7, 2019, 9:28 PM IST

ಮೈಸೂರು : 16ರ ಹರೆಯದಬುದ್ದಿಮಾಂದ್ಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಇಲ್ಲಿನ ಪೋಕ್ಸೋ ವಿಶೇಷ ನ್ಯಾಯಾಲಯವು 10 ವರ್ಷ ಕಠಿಣ ಸಜೆ ಮತ್ತು 30 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.

ಎಚ್.ಡಿ.ಕೋಟೆ ತಾಲೂಕಿನ ಅಗತ್ತೂರು ಗ್ರಾಮದ ಸಿದ್ದನಾಯಕ(65) ಎಂಬಾತ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಬಾಲಕಿಯ ಚಿಕ್ಕಪ್ಪ 2018ರ ಜನವರಿ 24 ರಂದು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ, ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆರೋಪಿಯನ್ನು ತನಿಖೆಗೊಳಪಡಿಸಿ ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಧೀಶೆ ಬಿ.ಎಸ್.ಜಯಶ್ರೀ, ಅಭಿಯೋಜನೆಯ ಸಾಕ್ಷ್ಯಾಧಾರಗಳನ್ನು ಕೂಲಂಕಷವಾಗಿ ಪರಿಗಣಿಸಿ ಆರೋಪಿತನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯಿದೆಯಡಿ ತಪ್ಪಿತಸ್ಥನೆಂದು ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಬಿ.ಸಿ.ಶಿವರುದ್ರಪ್ಪ ವಾದ ಮಂಡಿಸಿದರು.

ABOUT THE AUTHOR

...view details