ಮೈಸೂರು:ಅಪ್ಪು ನಿಧನವನ್ನು ನೆನಪಿಸಿಕೊಂಡಾಗೆಲ್ಲ ನಮ್ಮ ಧ್ವನಿಯೇ ಬದಲಾಗುತ್ತದೆ. ಆ ನೋವನ್ನ ಸಂಪೂರ್ಣವಾಗಿ ಹೇಳಿಕೊಳ್ಳುವ ಸ್ಥಿತಿಯಲ್ಲೂ ನಾವಿಲ್ಲ. ಆ ನೋವಿನ ಜೊತೆಗೆ ಬದುಕುತ್ತಿದ್ದೇವೆ ಮತ್ತು ಮುಂದೆಯೂ ನೋವಿನ ಜೊತೆಗೆ ಬದುಕುತ್ತೇವೆ. ಅಪ್ಪು ಅವರದ್ದು ಅದ್ಭುತವಾದ ಆತ್ಮ. ಹೀಗಾಗಿ, ಅಪ್ಪುವನ್ನ ಜನ ಈಗಲೂ ನೆನಪಿಸಿಕೊಂಡು ಇಷ್ಟಪಡುತ್ತಾರೆ. ಅಪ್ಪು ಗಳಿಸಿರುವ ಈ ಪ್ರೀತಿ ಕಂಡು ನನಗೆ ಹೆಮ್ಮೆ ಆಗುತ್ತಿದೆ ಎಂದು ಪುನೀತ್ ಸಹೋದರ ಹಾಗೂ ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.
ಅಪ್ಪು ಕುರಿತು ಮಾತನಾಡಿದ ಸಹೋದರ ಶಿವರಾಜ್ ಕುಮಾರ್ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿದ ಶಿವಣ್ಣ, ಶಕ್ತಿಧಾಮಕ್ಕೆ ಇತ್ತೀಚಿಗೆ ನಾನು ಹೆಚ್ಚಾಗಿ ಬರುತ್ತಿದ್ದೇನೆ. ನಮ್ಮ ಮನಸ್ಸುಗಳಿಗೂ ಒಂದು ಬದಲಾವಣೆ ಆಗುತ್ತದೆ. ಮಕ್ಕಳಿಗೂ ಹೊಸ ಅನುಭವ ಆಗುತ್ತದೆ.
ಗೀತಾ ಶಿವರಾಜ್ಕುಮಾರ್ ಈಗ ಅದರ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ಅದರ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ. ಮೊನ್ನೆ ಶಕ್ತಿಧಾಮದ ಮಕ್ಕಳು ಇಷ್ಟಪಟ್ಟರು ಎಂದು ನಾನೇ ಡ್ರೈವ್ ಮಾಡಿಕೊಂಡು ಶೂಟಿಂಗ್ ಸ್ಪಾಟ್ಗೆ ಕರೆದುಕೊಂಡು ಹೋಗಿದ್ದೆ. ಅಲ್ಲಿ ಸ್ಕೂಲ್ ತೆರೆಯೋದಕ್ಕೆ ನಮಗೆ ಅನುಮತಿ ಸಿಗುತ್ತಿದೆ. ಆ ಕೆಲಸವು ಬೇಗ ಆಗುತ್ತದೆ ಎಂದು ತಿಳಿಸಿದರು.
ಸಿನಿಮಾ ಮಂದಿರಗಳ ಭರ್ತಿಗೆ ಅವಕಾಶ ನೀಡಬೇಕು: ರಾಜ್ಯದ ಸಿನಿಮಾ ಮಂದಿರಗಳ ಭರ್ತಿಗೆ ಅವಕಾಶ ನೀಡುವುದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡುತ್ತೇನೆ. ರಾಜ್ಯದ ಸಿನಿಮಾ ಮಂದಿರಗಳಲ್ಲಿ 50:50 ರಿಯಾಯಿತಿ ನೀಡದಿರುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇವೆ. ನಾವು ಕೊರೊನಾದ ಜೊತೆ ಜೊತೆಗೆ ಬದುಕಬೇಕಿದ್ದು, ಅದು ಅನಿವಾರ್ಯ ಎಂಬಂತಾಗಿದೆ. ಹೀಗಾಗಿ, ಎಲ್ಲಾ ಕ್ಷೇತ್ರಗಳಿಗೂ 50:50 ರೂಲ್ಸ್ ನಿಂದ ರಿಲ್ಯಾಕ್ಸ್ ಕೊಡಲಾಗಿದೆ. ಆದರೆ, ಸಿನಿಮಾ ಮಂದಿರಗಳಿಗೆ ಮಾತ್ರ ಈ ನಿಯಮ ಮುಂದುವರೆಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಟ ಶಿವರಾಜ್ ಕುಮಾರ್ ಮಾತನಾಡಿದರು ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಶನಿವಾರವಷ್ಟೇ ಕೂಡ ನಾನು ಈ ಬಗ್ಗೆ ಮಾಹಿತಿ ತೆಗೆದುಕೊಂಡಿದ್ದೇನೆ. ಆದರೆ, ಸಿನಿಮಾ ಮಂದಿರಗಳಿಗೆ ಯಾಕೆ ರಿಲ್ಯಾಕ್ಸ್ ಕೊಟ್ಟಿಲ್ಲ ಎಂಬುದು ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ನಮಗೆ ಸಾಕಷ್ಟು ಬಾರಿ ಅನುಕೂಲ ಮಾಡಿಕೊಟ್ಟಿದ್ದು, ಈಗಲೂ ನಮಗೆ ಅನುಕೂಲ ಮಾಡಿಕೊಡುವ ಭರವಸೆ ಇದೆ ಎಂದು ಶಿವರಾಜಕುಮಾರ್ ಹೇಳಿದರು.
ಓದಿ:ಸಿನಿಮಾ ಮಂದಿರ ಭರ್ತಿಗೆ ಅವಕಾಶ ನೀಡುವಂತೆ ಸಿಎಂ ಜತೆ ಮಾತನಾಡುತ್ತೇನೆ : ನಟ ಶಿವರಾಜ್ ಕುಮಾರ್