ಮೈಸೂರು:ಸಾಂಸ್ಕೃತಿಕ ನಗರಿಯಲ್ಲಿ ಮಹಾ ಶಿವರಾತ್ರಿ ಹಬ್ಬ ಜೋರಾಗಿದ್ದು, ಅರಮನೆ ಆವರಣದಲ್ಲಿರುವ ಶ್ರೀ ತ್ರಿನೇಶ್ವರ ಸ್ವಾಮಿಗೆ ಚಿನ್ನದ ಮುಖವಾಡ ಹಾಕಿ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಲಾಯ್ತು.
ಮೈಸೂರಿನಲ್ಲಿ ಮಹಾ ಶಿವರಾತ್ರಿ ಸಂಭ್ರಮ: ತ್ರಿನೇಶ್ವರನ ದರುಶನಕ್ಕೆ ಹರಿದುಬಂದ ಭಕ್ತವೃಂದ
ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿರುವ ಶ್ರೀ ತ್ರಿನೇಶ್ವರ ಸ್ವಾಮಿಗೆ ಚಿನ್ನದ ಮುಖವಾಡ ಹಾಕಿ ವಿಶೇಷ ಪೂಜೆ ಸಲ್ಲಿಸಲಾಯ್ತು.
ಸಾಂಸ್ಕೃತಿಕ ನಗರಿಯಲ್ಲಿ ಮಹಾ ಶಿವರಾತ್ರಿ ಹಬ್ಬ ಬಹಳ ಜೋರಾಗಿದ್ದು, ಅರಮನೆ ಆವರಣದಲ್ಲಿರುವ ಶ್ರೀ ತ್ರಿನೇಶ್ವರ ಶಿವಲಿಂಗಕ್ಕೆ ಜಿಲ್ಲಾ ಖಜಾನೆಯಲ್ಲಿದ್ದ ಐತಿಹಾಸಿಕ ಚಿನ್ನದ ಮುಖವಾಡವನ್ನು ಧರಿಸಲಾಗಿದೆ. ಇಂದು ಮುಂಜಾನೆ 6 ಗಂಟೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಗಳನ್ನು ನಡೆಸಿ, ಶಿವಲಿಂಗಕ್ಕೆ ಅಭಿಷೇಕ ಮಾಡಿ 11 ಕೆಜಿ ತೂಕದ ಚಿನ್ನದ ಮುಖವಾಡವನ್ನು ಧಾರಣೆ ಮಾಡಲಾಯಿತು.
ಇದನ್ನು ನೋಡಲು ಹಾಗೂ ಮಹಾ ಶಿವನ ದರ್ಶನ ಪಡೆಯಲು ಭಕ್ತಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆ 6 ಗಂಟೆಯಿಂದಲೆ ಭಕ್ತಾದಿಗಳು ಬರುತ್ತಿದ್ದಾರೆ. ಅಲ್ಲದೆ ರಾತ್ರಿ 12 ಗಂಟೆವರೆಗೂ ಶಿವನ ದರ್ಶನ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.