ಮೈಸೂರು : ನವರಾತ್ರಿಯ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.
ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ - Shobha Karandlaje latest news
ಸಂಸದೆ ಶೋಭಾ ಕರಂದ್ಲಾಜೆ ಇಂದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಪೂಜೆ ಸಲ್ಲಿಸಿದ ಕರಂದ್ಲಾಜೆ ತಾಯಿಗೆ ಹರಕೆ ತೀರಿಸಿದರು..
![ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ Shobha Karandlaje visits Chamundi temple](https://etvbharatimages.akamaized.net/etvbharat/prod-images/768-512-9289750-994-9289750-1603470318523.jpg)
ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ
ಪ್ರತಿ ವರ್ಷ ನವರಾತ್ರಿಯ ಸಂದರ್ಭದಲ್ಲಿ ತಪ್ಪದೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಸಂಸದೆ ಶೋಭಾ ಕರಂದ್ಲಾಜೆ, ಇಂದು ಸಂಜೆ ಬೆಟ್ಟಕ್ಕೆ ಭೇಟಿ ನೀಡಿ ಹರಕೆ ತೀರಿಸಿದರು.
ಪ್ರತಿವರ್ಷ ಆನೆಗಳ ಜೊತೆ ಬರುವ ಮಾವುತರು ಮತ್ತು ಕಾವಾಡಿಗಳಿಗೆ ಅರಮನೆ ಆವರಣದಲ್ಲಿ ತಿಂಡಿ ವ್ಯವಸ್ಥೆ ಮಾಡಿ ಅವರಿಗೆ ಸನ್ಮಾನಿಸುವ ರೂಢಿ ಪಾಲಿಸಿಕೊಂಡು ಬಂದಿರುವ ಸಂಸದೆ ಶೋಭಾ ಕರಂದ್ಲಾಜೆ, ನಾಳೆ ಬೆಳಗ್ಗೆ ಮಾವುತ ಮತ್ತು ಕಾವಾಡಿಗಳ ಕುಟುಂಬದವರಿಗೆ ತಿಂಡಿ ವ್ಯವಸ್ಥೆ ಮಾಡಲಿದ್ದಾರೆ.