ಮೈಸೂರು:ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರಂ ನಿರ್ಜನ ಪ್ರದೇದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಬಗ್ಗೆ ಅಘಾತಕಾರಿಯಾದ ಮಾಹಿತಿ ಸಿಕ್ಕಿದೆ ಎಂದು ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಹೇಳಿದರು.
ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರಂ ನಿರ್ಜನ ಪ್ರದೇಶಕ್ಕೆ ಉಗ್ರಪ್ಪ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಸ್ಥಳ ಪರಿಶೀಲನೆ ನಡೆಸಲಾಗಿದೆ. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆಸ್ಪತ್ರೆಗೆ ತೆರೆಳಿ ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಇಲ್ಲಿ ಅತ್ಯಂತ ಅಘಾತಕಾರಿ ಮಾಹಿತಿಗಳು ಸಿಕ್ಕಿವೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂಜೆ ಸುದ್ದಿಗೋಷ್ಠಿ ಕರೆಯಲಾಗಿದೆ. ಆಗ ಸಂಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು.