ಕರ್ನಾಟಕ

karnataka

ETV Bharat / state

ಫರ್ನಿಚರ್ ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್​: ಲಕ್ಷಾಂತರ ರೂ.ನಷ್ಟ

ಮೈಸೂರಿನ ಫರ್ನಿಚರ್ ಅಂಗಡಿಯೊಂದರಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಅಗ್ನಿ ದುರಂತ ಉಂಟಾಗಿದ್ದು, ಬೆಲೆಬಾಳುವ ಪೀಠೋಪಕರಣಗಳು ಸುಟ್ಟಿವೆ.

short cercuit in furniture shop in mysore
ಫರ್ನಿಚರ್ ಅಂಗಡಿಯಲ್ಲಿ ಬೆಂಕಿ

By

Published : Feb 12, 2021, 2:20 PM IST

ಮೈಸೂರು: ಫರ್ನಿಚರ್ ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್​ ನಿಂದ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂ.ಮೌಲ್ಯದ ಪೀಠೋಪಕರಣಗಳು ಸುಟ್ಟು ಹೋಗಿರುವ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.

ಫರ್ನಿಚರ್ ಅಂಗಡಿಯಲ್ಲಿ ಬೆಂಕಿ
ಸಮಿ ಉಲ್ಲಾ ರೆಹಮಾನ್ ಎಂಬುವವರಿಗೆ ಸೇರಿದ ಫರ್ನಿಚರ್ ಶಾಪ್​ನಲ್ಲಿ ಗುರುವಾರ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಲಕ್ಷಾಂತರ ರೂ. ಬೆಲೆಬಾಳುವ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಅಗ್ನಿ‌ಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ABOUT THE AUTHOR

...view details