ಮೈಸೂರು: ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ರಿಲ್ಯಾಕ್ಸ್ ಮೂಡಿನಲ್ಲಿದ್ದು ಇಂದು ಮುಂಜಾನೆ ಕಬಿನಿ ಹಿನ್ನೀರಿನಲ್ಲಿ ಸಫಾರಿ ಮಾಡಿದರು.
ಭಾನುವಾರ ರಾತ್ರಿ ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ಸೋಮವಾರ ಹೆಚ್.ಡಿ.ತಾಲೂಕಿನ ರೆಸಾರ್ಟ್ಗೆ ತೆರಳಿ ವಿಶ್ರಾಂತಿ ಪಡೆದರು. ಮಂಗಳವಾರ ಮುಂಜಾನೆ ವಾಕಿಂಗ್ ಮಾಡಿ, ನಂತರ ಕಬಿನಿ ಹಿನ್ನೀರಿನಲ್ಲಿ ಬೋಟಿಂಗ್ ಸಫಾರಿ ಮಾಡಿದರು.