ಮೈಸೂರು:ಸಿದ್ದರಾಮಯ್ಯ ಸಿದ್ರಾಮುಲ್ಲಾ ಖಾನ್ ಎಂಬುದು ಇಡೀ ಜಗತ್ತಿಗೆ ಗೊತ್ತು. ಇನ್ನು ಮುಂದೆ ಸಿದ್ದರಾಮಯ್ಯ ಅವರ ಹೆಸರನ್ನು ಸಿದ್ರಾಮುಲ್ಲಾ ಖಾನ್ ಎಂದು ಬದಲಾಯಿಸಿಕೊಳ್ಳುವುದು ಒಳ್ಳೆಯದ್ದು ಎಂದು ಮೈಸೂರಿನಲ್ಲಿ ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ನೀಡಿದ್ದಾರೆ.
ಇಂದು ಮೈಸೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಶಾಸಕ ಸಿ ಟಿ ರವಿ ಮನೆಗೆ ಕಾಂಗ್ರೆಸ್ ಮುತ್ತಿಗೆ ಹಾಕಿರುವುದು ಸರಿಯಲ್ಲ, ಇದನ್ನು ಖಂಡಿಸುತ್ತೇನೆ. ಸಿದ್ದರಾಮಯ್ಯ ಅವರನ್ನು ಸಿ ಟಿ ರವಿ ಸಿದ್ರಾಮುಲ್ಲಾ ಖಾನ್ ಎಂಬ ಹೇಳಿಕೆ ಸಮರ್ಥಿಸಿಕೊಂಡರು.
ಕಾಂಗ್ರೆಸ್ ಕನಸು ಕಾಣುತ್ತಿದೆ:ಮುಂದಿನ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ನವರು ಕನಸು ಕಾಣುತ್ತಿದ್ದಾರೆ. ಪರಸ್ಪರ ಕಿತ್ತಾಡಿಕೊಳ್ಳುತ್ತಿರುವ ಕಾಂಗ್ರೆಸ್ನವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಬೇಗ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ. ಇನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು ಮಂಜೂರಾದ ಹುದ್ದೆಗಳಿಗೆ ಮಾತ್ರ ನಾವು ಅನುದಾನ ಕೊಡುತ್ತೇವೆ. ಹೆಚ್ಚುವರಿ ನೇಮಕಾತಿ ಮಾಡಿಕೊಂಡರೆ ಅವರ ಸಂಪನ್ಮೂಲದಲ್ಲಿ ವೇತನ ಕೊಡಬೇಕು. ಇದಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಅಧಿಕಾರದ ಆಸೆಯಿಂದ ಬೇರೆಯವರಿಗೆ ಸಿದ್ದರಾಮಯ್ಯ ಅವಕಾಶ ಕೊಡುತ್ತಿಲ್ಲ: ಡಾ. ಅಶ್ವತ್ಥನಾರಾಯಣ