ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತೀನಿ ಎಂದು ಕನಸು ಕಾಣುತ್ತಿದ್ದಾರೆ. ಅದು ಅವರ ಭ್ರಮೆಯಾಗಿಯೇ ಉಳಿಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗೋದು ಭ್ರಮೆ: ಸಚಿವ ಶ್ರೀರಾಮುಲು - ಮೈಸೂರಿನಲ್ಲಿ ಶ್ರೀರಾಮುಲು ಲೇಟೆಸ್ಟ್ ಸುದ್ದಿಗೋಷ್ಠಿ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಕನಸು ಕೇವಲ ಭ್ರಮೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಹುಣಸೂರು ತಾಲೂಕಿನ ಪತ್ರಕರ್ತರ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನ ಗೆದ್ದರೆ ಅಧಿಕಾರಕ್ಕೆ ಬರಬಹುದು ಎಂದು ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ. ಈ ಕನಸನ್ನು ಕನಸಾಗಿಯೇ ಉಳಿಸುತ್ತೇವೆ ಎಂದ್ರು.
ಹುಣಸೂರಿನಲ್ಲಿ ಹೆಚ್.ವಿಶ್ವನಾಥ್ ಗೆದ್ದರೆ ಮಂತ್ರಿಯಾಗುತ್ತಾರೆ. ಅಭಿವೃದ್ಧಿ ಕೆಲಸ ಮಾಡುತ್ತಾರೆ. ಆದರೆ ಮಂಜುನಾಥ್ ಗೆದ್ದರೆ ಯಾವ ಅಭಿವೃದ್ಧಿಯಾಗುವುದಿಲ್ಲ. ಹುಣಸೂರು ಸೇರಿದಂತೆ ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆದ್ದು ತೋರಿಸ್ತೀವಿ ಎಂದು ಸಚಿವ ಶ್ರೀರಾಮುಲು ಹೇಳಿದ್ರು.
TAGGED:
ಸಚಿವ ಶ್ರೀರಾಮುಲು ಮೈಸೂರು ಭೇಟಿ