ಕರ್ನಾಟಕ

karnataka

ETV Bharat / state

ರಾಜ್ಯದ ದುಡ್ಡು ಮಂತ್ರಿಗಳ‌ ಜೇಬಿಗೆ ಹೋಯಿತೇ?: ಸಿದ್ದರಾಮಯ್ಯ ಪ್ರಶ್ನೆ - mysore latest news

ಬಿಜೆಪಿ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ, ಟ್ವೀಟ್​ ಮಾಡುವ ಮೂಲಕ ಸಿಎಂ ಬಿಎಸ್​ವೈ ಅವರನ್ನು ಪ್ರಶ್ನಿಸಿದ್ದಾರೆ. ಕೇಂದ್ರದಿಂದ ಪರಿಹಾರ ಕೇಳಲು ನಿಮಗೆ ಭಯವೇ ಎಂದಿದ್ದಾರೆ.

Siddaramaiah outrage against Yadiyurappa
ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ‌ ಪ್ರಶ್ನೆ

By

Published : Nov 2, 2020, 6:37 PM IST

ಮೈಸೂರು: ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನ ಪ್ರಶ್ನಿಸಿದ್ದಾರೆ.

ಆಗಸ್ಟ್‌ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿ ಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲ ಹಿಡಿದಿದ್ದಾರೆ.

ಉತ್ತರ ಕೊಡಿ ಬಿಎಸ್‌ವೈ ಅವರೇ ಎಂದು ಟ್ವೀಟರ್​ನಲ್ಲಿ ಕೇಳಿದ್ದಾರೆ. ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಪರಿಹಾರ ಕೇಳಿದ್ದು ರೂ. 35,000 ಕೋಟಿ, ಅವರು ನೀಡಿದ್ದು ರೂ. 1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈವರೆಗೆ ಕೇಳಿದ್ದು, ರೂ. 4000 ಕೋಟಿ. ಕೇಂದ್ರದಿಂದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ‌ ಪ್ರಶ್ನೆ

ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ. ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ. ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2,24,000. ಆದರೆ ಪರಿಹಾರ ನೀಡಿರುವುದು ಮಾತ್ರ 1,24,000 ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಸರ್ಕಾರ ಪರಿಹಾರ ನೀಡುವುದು ಯಾವಾಗ ಎಂದು ಆಕ್ರೋಶ ಹೊರಹಾಕಿದ್ದಾರೆ.

ABOUT THE AUTHOR

...view details