ಮೈಸೂರು: ಶಾಸಕ ಜಿ.ಟಿ.ದೇವೇಗೌಡರಿಗೆ ಕಾಂಗ್ರೆಸ್‌ಗೆ ಬರೋದಿಕ್ಕೆ ಮನಸ್ಸು ಇದೆ. ಆದರೆ, ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ ಅಲ್ಲಿಯೇ ಉಳಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೇರ್ಗಳ್ಳಿ ಹೊಂಬಾಳಮ್ಮ ಸಿದ್ದರಾಮೇಶ್ವರ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ಕ್ಷೇತ್ರಕ್ಕೆ ಬರೋದಕ್ಕೆ ತುಂಬಾ ಬೇಸರ ಆಗಿತ್ತು. ಹಲವು ದಿನಗಳ ಬಳಿಕ ನಾನು ಚಾಮುಂಡೇಶ್ವರಿ ಕ್ಷೇತ್ರದಕ್ಕೆ ಬಂದಿದ್ದೇನೆ. ಚುನಾವಣೆಯಲ್ಲಿ ನಾನು ಜಿ. ಟಿ ದೇವೇಗೌಡ ಪರಸ್ಪರ ಎದುರಾಗಿದ್ದೆವು. ಚುನಾವಣೆಯಲ್ಲಿ ನನ್ನನ್ನೇ ಸೋಲಿಸಿದ್ದ ಗಿರಾಕಿ ಆತ ಎಂದು ಹಾಸ್ಯ ಚಟಾಕಿ ಹಾರಿಸಿದರು.