ಕರ್ನಾಟಕ

karnataka

ETV Bharat / state

ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ: ಸಿದ್ದರಾಮಯ್ಯ - ಈಟಿವಿ ಭಾರತ ಕನ್ನಡ

ಬಿಜೆಪಿಯ ಶಾಸಕ ಮಾಡಾಳ್​ ವಿರೂಪಾಕ್ಷಪ್ಪರನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸಿದ್ದರಾಮಯ್ಯ
ಸಿದ್ದರಾಮಯ್ಯ

By

Published : Mar 6, 2023, 2:15 PM IST

ಮೈಸೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎಲ್ಲಿದ್ದಾರೆ ಎಂಬುದು ಸರ್ಕಾರಕ್ಕೆ ಗೊತ್ತಿದೆ. ಅವರು ಮನೆಯಲ್ಲಿಯೇ ಓಡಾಡಿಕೊಂಡಿದ್ದಾರೆ. ಅವರನ್ನು ಬಂಧಿಸದೇ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಮೈಸೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಶಾರದಾದೇವಿ ನಗರದಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳ‌ ಜೊತೆ ಮಾತನಾಡಿದ ಅವರು, ಲುಕ್ ಔಟ್ ನೋಟಿಸ್ ಹೆಸರಿನಲ್ಲಿ ಜನರನ್ನು ಬೇರೆ ಕಡೆ ಡೈವರ್ಟ್ ಮಾಡುತ್ತಿದ್ದಾರೆ. ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಂದಾಗ ಏಕೆ ಬಂಧಿಸಲಿಲ್ಲ ಎಂದು ಪ್ರಶ್ನೆ ಮಾಡಿದರು. ಮುಖ್ಯಮಂತ್ರಿಗಳು ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಸಾಕ್ಷಿ ಸಿಕ್ಕಿದೆ, ಏನು ಕ್ರಮ ಕೈಗೊಂಡಿದ್ದಿರಿ ಎಂದು ಪ್ರಶ್ನೆ ಮಾಡಿದ ಸಿದ್ದರಾಮಯ್ಯ, ನಿಮಗೆ ಈ ಪ್ರಕರಣದಿಂದ ಮುಜುಗರ ಇಲ್ಲ ಎಂದು ಸಮರ್ಥನೆ ಮಾಡಿಕೊಳ್ಳುತ್ತಿದ್ದೀರಿ. ನಿಮಗೆ ಮುಜುಗರ ಆಗಿದೆ. ಬಿಜೆಪಿ ಶಾಸಕ ಅಧ್ಯಕ್ಷನಾಗಿದ್ದ ಕಾರಣ ಅವರ ಮಗನಿಗೆ ಲಂಚ ಕೊಡಲು ಬಂದಿದ್ದರು. ಹೀಗಾಗಿ ಈ ಪ್ರಕರಣದಲ್ಲಿ ಶಾಸಕ ಮೊದಲ ಆರೋಪಿ, ಅವರನ್ನು ಬಂಧಿಸಬೇಕು ಎಂದು ಬಿಜೆಪಿ ಸರ್ಕಾರದ ವಾಗ್ದಾಳಿ ನಡೆಸಿದರು.

ನಾನು ಲೋಕಾಯುಕ್ತವನ್ನು ಮುಚ್ಚಿಲ್ಲ, ನಾನೇನಾದರೂ ಲೋಕಾಯುಕ್ತವನ್ನ ಮುಚ್ಚಿದ್ದರೆ ಇವತ್ತೇ ರಾಜೀನಾಮೆ ಕೋಡುತ್ತೇನೆ. ನಾವು ಭ್ರಷ್ಟಾಚಾರ ನಿಗ್ರಹಕ್ಕೆ ಎಸಿಬಿ ರಚನೆ ಮಾಡಿದೆವು ಅಷ್ಟೇ. ನಾವು ಲೋಕಾಯುಕ್ತದಿಂದ ಯಾವುದೇ ಅಧಿಕಾರವನ್ನು ಕಿತ್ತುಕೊಂಡಿಲ್ಲ. ನಮ್ಮ ಸರ್ಕಾರದ ಕಾಲದಲ್ಲೂ ಲೋಕಾಯುಕ್ತ ಇತ್ತು. ಎಲ್ಲ ಸತ್ಯ ಗೊತ್ತಿದ್ದರು, ಮುಖ್ಯಮಂತ್ರಿ ಬೊಮ್ಮಾಯಿಯವರು ಜನರ ಮುಂದೆ ಸುಳ್ಳನ್ನು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಎಸಿಬಿಯನ್ನು ನಮ್ಮ ಸರ್ಕಾರ ಬಂದರೆ ರದ್ದು ಮಾಡುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ, ಎಸಿಬಿ ರದ್ದು ಮಾಡಿದ್ದು ಬಿಜೆಪಿಯವರಲ್ಲ, ನ್ಯಾಯಾಲಯ ರದ್ದು ಮಾಡಿತ್ತು.‌ ಹೀಗೆ ಸುಳ್ಳನ್ನ ಹೇಳುವುದು ಬಿಜೆಪಿಯವರಿಗೆ ಚಟ. ಸುಳ್ಳೇ ಬಿಜೆಪಿಯವರ ಮನೆ ದೇವರು. ಹೀಗಾಗಿ ಬಿಜೆಪಿಯವರು ಸುಳ್ಳನ್ನು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದರು.

ಬೆಂಗಳೂರು-ಮೈಸೂರು ಹೈವೇ ಪರಿಶೀಲನೆ:ಬೆಂಗಳೂರು ಮೈಸೂರು ದಶಪಥ ರಸ್ತೆಯನ್ನು ಮಾರ್ಚ್ 9 ಕ್ಕೆ ನಾನು ಪರಿಶೀಲನೆ ಮಾಡುತ್ತೇನೆ. ಈ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು. ಪ್ರತಾಪ್ ಸಿಂಹನಿಗಾಗಲಿ, ಬಿಜೆಪಿ ಸರ್ಕಾರಕ್ಕಾಗಲಿ ಈ ದಶಪಥ ರಸ್ತೆಯ ನಿರ್ಮಾಣದಲ್ಲಿ ಯಾವುದೇ ಪಾತ್ರವಿಲ್ಲ. ರಸ್ತೆಯನ್ನು ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿ ಆಗಿದ್ದ ಮಹಾದೇವಪ್ಪ ಹಾಗೂ ಕೇಂದ್ರದಲ್ಲಿ ಹಿಂದೆ ಮಂತ್ರಿ ಆಗಿದ್ದ ಆಸ್ಕರ್ ಫರ್ನಾಂಡೀಸ್ ಕಾಲದಲ್ಲಿ ಅಪ್ರೂವಲ್ ಆಗಿತ್ತು. ‌ಇದನ್ನು ನಮ್ಮ ಸಾಧನೆ ಎಂದು ಪ್ರತಾಪ್ ಸಿಂಹ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇದು ನಮ್ಮ ಸರ್ಕಾರದ ಕೊಡುಗೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಡಾಳ್ ವಿರುಪಾಕ್ಷಪ್ಪ

ABOUT THE AUTHOR

...view details