ಕರ್ನಾಟಕ

karnataka

ETV Bharat / state

ಬಾಂಬ್​ ಪತ್ತೆ ಪ್ರಕರಣದ ದಿಕ್ಕು ತಪ್ಪಿಸಬೇಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ - siddaramaiah latest tweet

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವ ಆರೋಪಿ ಆದಿತ್ಯ ರಾವ್ ಎಂಬುವರ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸತ್ಯತೆಗಳನ್ನು ಬಯಲಿಗೆಳೆಯಬೇಕು. ಆತನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿ ಹಾಕಬಾರದೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Siddaramaiah series tweet on Mangalore bomb issue!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

By

Published : Jan 22, 2020, 5:25 PM IST

ಮೈಸೂರು:ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆಸ್ವಸ್ಥನೆಂದು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡದೇ ನಿಸ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಪ್ರಕರಣವನ್ನು ದಿಕ್ಕು ತಪ್ಪಿಸಬೇಡಿ....ಸರಣಿ ಟ್ವೀಟ್​ ಮೂಲಕ ಸಿದ್ದು ಆಗ್ರಹ!

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವ ಆರೋಪಿ ಆದಿತ್ಯ ರಾವ್ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸತ್ಯತೆಗಳನ್ನು ಬಯಲಿಗೆಳೆಯಬೇಕು. ಆತನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿ ಹಾಕಬಾರದು. ನಿರ್ದಿಷ್ಟ ಪೂರ್ವಗ್ರಹ ಹೊಂದಿರುವ ಸಂಘ ಪರಿವಾರದವರು ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಸಾಮಾನ್ಯ ಅಪರಾಧ ಪ್ರಕರಣಗಳಿಗೆ ಕೋಮು ಬಣ್ಣ ಬಳಿಯುತ್ತಿರುವುದು ಆಶಾಂತಿ ನಡೆಯಲು ಕಾರಣವಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಲ್ಲದೆ, ಇದಕ್ಕೆ ಈ ಪ್ರಕರಣದ ಬಗ್ಗೆ ಇರುವ ಮೌನವೇ ಸಾಕ್ಷಿಯಾಗಿದೆ ಎಂದು ಅಸಮಾಧಾನವನ್ನು ಅವರು ಹೊರಹಾಕಿದ್ದಾರೆ.

ಪ್ರಕರಣವನ್ನು ದಿಕ್ಕು ತಪ್ಪಿಸಬೇಡಿ....ಸರಣಿ ಟ್ವೀಟ್​ ಮೂಲಕ ಸಿದ್ದು ಆಗ್ರಹ!

ನಮ್ಮ ರಾಜ್ಯದ ಪೊಲೀಸರು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯಲು ಹೋಗದೆ ವೃತ್ತಿಪರತೆಯಿಂದ ಕೆಲಸ ಮಾಡಬೇಕು. ಮಂಗಳೂರು ಪೊಲೀಸರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಅನಗತ್ಯವಾಗಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿ ಪರಿಸ್ಥಿತಿಯನ್ನು ಬಿಗಡಾಯಿಸಲು ಕಾರಣವಾಗುತ್ತಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿಯನ್ನು ಅಸ್ವಸ್ಥ ಎಂದು ಬಿಂಬಿಸಿ ಪ್ರಕರಣವನ್ನು ದಿಕ್ಕು ತಪ್ಪಿಸದಂತೆ ತನಿಖೆ ನಡೆಸಬೇಕು ಎಂದು ಸರಣಿ ಟ್ವೀಟ್ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ABOUT THE AUTHOR

...view details